ಕಾಮಾಗಾರಿಗಳನ್ನು ತಡೆ ಹಿಡಿದ ರಾಜ್ಯ ಸರ್ಕಾರ: ತಕ್ಷಣ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಿ: ಉಸ್ತುವಾರಿ ಸಚಿವರ ಗಮನ ಸೆಳೆದ ಶಾಸಕ ಹರೀಶ್ ಪೂಂಜ:

 

 

ಮಂಗಳೂರು :ಕಾಂಗ್ರೆಸ್ ಸರ್ಕಾರ ಜಿಲ್ಲೆಯಲ್ಲಿ ಕೆಲವು ಕಾಮಾಗಾರಿಗಳನ್ನು ತಡೆ ಹಿಡಿದಿದೆ. ದಯವಿಟ್ಟು ಈ ಬಗ್ಗೆ ಕ್ರಮ ವಹಿಸಬೇಕು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರ ಗಮನ ಸೆಳೆದರು.
ಮಂಗಳೂರಿನ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ  ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ತ್ರೈಮಾಸಿಕ ಕೆ.ಡಿ.ಪಿ ಸಭೆಯಲ್ಲಿ ಮಾತನಾಡಿದ ಅವರು ಹಿಂದಿನ ಸರ್ಕಾರ ಮಂಜೂರುಗೊಳಿಸಿದ ಕಾಮಾಗಾರಿಗಳನ್ನು ಈಗಿನ ರಾಜ್ಯ ಸರ್ಕಾರ ತಡೆಹಿಡಿಯುವಂತೆ ಆದೇಶ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಪ್ರಾರಂಭವಾದರೆ 6 ತಿಂಗಳು ಯಾವುದೇ ಕಾಮಾಗಾರಿ ಮಾಡಲು ಸಾಧ್ಯವಾಗುವುದಿಲ್ಲ.
ಬೆಳ್ತಂಗಡಿ ತಾಲೂಕಿನ ಕೆಲವು ಕಡೆಗಳಲ್ಲಿ ರಸ್ತೆಗಳ ಅರ್ಥ್ ವರ್ಕ್ ಮಾಡಿ ಗುತ್ತಿಗೆದಾರರು ಕೆಲಸ ಅರ್ಧಕ್ಕೆ ನಿಲ್ಲಿಸಿರುವುದರಿಂದ ಜನರಿಗೆ ಸಮಸ್ಯೆಯಾಗುತ್ತಿದೆ.
ಅದ್ದರಿಂದ ತಡೆ ಹಿಡಿದಿರುವ ಕಾಮಾಗಾರಿಗಳನ್ನು ಪೂರ್ಣಗೊಳಿಸಲು ಅದಷ್ಟೂ ಬೇಗ ಕ್ರಮ ಕೈಗೊಳ್ಳಬೇಕು. ಈ ಮೂಲಕ ಜಿಲ್ಲೆಯ ಅಭಿವೃದ್ಧಿಗೆ ಸಹಕಾರ ನೀಡಬೇಕು ಎಂದು ಉಸ್ತುವಾರಿ ಸಚಿವರಲ್ಲಿ ವಿನಂತಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಉಸ್ತುವಾರಿ ಸಚಿವರು ಈ ಬಗ್ಗೆ ಮಾಹಿತಿಗಳನ್ನು ಪಡೆದು ಅಧಿಕಾರಿಗಳಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.ಸಭೆಯಲ್ಲಿ  ವಿಧಾನ ಸಭಾ ಸಭಾಪತಿ ಯು.ಟಿ. ಖಾದರ್,  ಜಿಲ್ಲೆಯ ವಿವಿಧ ತಾಲೂಕಿನ   ಶಾಸಕರುಗಳು, ವಿಧಾನ ಪರಿಷತ್ ಸದಸ್ಯರು ಜಿಲ್ಲಾಧಿಕಾರಿ, ಪೊಲೀಸ್ ಅಧೀಕ್ಷಕ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

error: Content is protected !!