ಕ್ರಿಕೆಟಿಗ ಕೆ.ಎಲ್. ರಾಹುಲ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

 

 

 

 

 

ಬೆಳ್ತಂಗಡಿ : ಭಾರತ ಕ್ರಿಕೆಟ್ ತಂಡದ ಆಟಗಾರ ಕೆ.ಎಲ್. ರಾಹುಲ್ ಅವರು ಜೂ 25 ಆದಿತ್ಯವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿ ದೇವರ ದರ್ಶನ ಪಡೆದು ನಂತರ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಈ ವೇಳೆ ಹೆಗ್ಗಡೆಯವರು ಕೆ.ಎಲ್. ರಾಹುಲ್ ಅವರನ್ನು ಸನ್ಮಾನಿಸಿದರು.
ಈ ಸಂದರ್ಭ ಹೇಮಾವತಿ ವಿ. ಹೆಗ್ಗಡೆ, ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್ ಮತ್ತು ಶ್ರೇಯಸ್ ಕುಮಾರ್ ಉಪಸ್ಥಿತರಿದ್ದರು.

error: Content is protected !!