ವಿದ್ಯಾರ್ಥಿಗಳ ಶೈಕ್ಷಣಿಕ ಜೀವನವನ್ನು ಪ್ರೋತ್ಸಾಹಿಸಿ ಹುಟ್ಟುಹಬ್ಬ ಆಚರಣೆ: ಬಡ ಮಕ್ಕಳಿಗೆ ಪುಸ್ತಕ, ಬ್ಯಾಗ್ ವಿತರಿಸಿದ ಪ್ರೇಮ್ ರಾಜ್ ರೋಶನ್ ಸಿಕ್ವೇರಾ: ರಾಜಕೇಸರಿ ಸಂಘಟನೆಯಿಂದ 540ನೇ ಸೇವಾ ಕಾರ್ಯ

ಬೆಳ್ತಂಗಡಿ: ರಾಜಕೇಸರಿ ಸಂಘಟನೆಯ ಗೌರವ ಸಲಹೆಗಾರರಾದ ಪ್ರೇಮ್ ರಾಜ್ ರೋಶನ್ ಸಿಕ್ವೇರಾ ಇವರು ತಮ್ಮ ಹುಟ್ಟು ಹಬ್ಬದ ಪ್ರಯುಕ್ತ ಹಾಗೂ ರಾಜಕೇಸರಿ ಸಂಘಟನೆಯ 540ನೇ ಸೇವಾ ಕಾರ್ಯಕ್ರಮವಾಗಿ ಜೂ.26ರಂದು ಲಾಯಿಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕರ್ನೋಡಿಯಲ್ಲಿ ಬಡ ಮಕ್ಕಳಿಗೆ ಪುಸ್ತಕ ಮತ್ತು ಬ್ಯಾಗ್ ವಿತರಣೆ ಮಾಡಿದ್ದಾರೆ. ಬಳಿಕ ಮಕ್ಕಳಿಗೆ ಸಿಹಿ ತಿಂಡಿ ವಿತರಿಸಲಾಯಿತು.

ಲಾಯಿಲ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಆಶಾ ಬೆನೆಡಿಕ್ಟ ಸಲ್ಡಾನರವರು ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಗ್ರಾ.ಪಂ ಸದಸ್ಯರಾದ ಪ್ರಸಾದ್ ಶೆಟ್ಟಿ ಎಣಿಂಜೆ , ಮಹೇಶ. ಕೆ , ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ (ರಿ) ನ ಸಂಸ್ಥಾಪಕರಾದ ದೀಪಕ್ ಜಿ , ಮತ್ತು ಶಾಲಾ ಮುಖ್ಯೋಪಾಧ್ಯಾಯರು, ಜಗನ್ನಾಥ ಎಮ್ ಉಪಸ್ಥಿತರಿದ್ದರು.


ವಿದ್ಯಾರ್ಥಿಗಳು ಪ್ರಾರ್ಥಿಸಿ, ಶಾಲಾ ಮುಖ್ಯೋಪಾಧ್ಯಾಯರು ಸ್ವಾಗತಿಸಿ, ಶಿಕ್ಷಕ ಕೃಷ್ಣ ಕುಮಾರ್ ಧನ್ಯವಾದವಿತ್ತರು. ಶಿಕ್ಷಕಿ ಉಷಾ .ಕೆ ಕಾರ್ಯಕ್ರಮ ನಿರೂಪಿಸಿದರು.

error: Content is protected !!