ಬೆಳ್ತಂಗಡಿ: ಜನರು ಇತ್ತೀಚೆಗೆ ಸಕ್ಕರೆ ಖಾಯಿಲೆ, ರಕ್ತದ ಒತ್ತಡ ಹೀಗೆ ಬೇರೆ, ಬೇರೆ ಆರೋಗ್ಯದ ಸಮಸ್ಯೆಗಳಿಗೆ ತುತ್ತಾಗಿ ರಕ್ತದಾನ ಮಾಡಲು ಸಾಧ್ಯವಾಗುತ್ತಿಲ್ಲ. ಮನುಷ್ಯ ಯಾವಾಗಲೂ ದುಡ್ಡು ಸಂಪಾದನೆ ಮಾಡಬಹುದು. ಆದರೆ ತನ್ನ ಆರೋಗ್ಯವನ್ನು ಕಾಪಾಡಿಕೊಳ್ಳುವವನೇ ಶ್ರೇಷ್ಠ ವ್ಯಕ್ತಿ ಎಂದು ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ (ನಿ) ಉಜಿರೆ ಅಧ್ಯಕ್ಷರಾದ ರಂಜನ್ ಜಿ. ಗೌಡ ಅವರು ಹೇಳಿದ್ದಾರೆ.
ಅವರು ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ ಉಜಿರೆ, ಒಕ್ಕಲಿಗ ಗೌಡರ ಯುವ ವೇದಿಕೆ, ಮಹಿಳಾ ವೇದಿಕೆ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಉಜಿರೆ ಇದರ ಸಹಯೋಗದಲ್ಲಿ ಉಜಿರೆ ಕೃಷ್ಣನುಗ್ರಹ ಸಭಾಭವನದಲ್ಲಿ ಕೆಂಪೇಗೌಡ ಜಯಂತಿ ಆಚರಣೆ ಹಾಗೂ ಪ್ರಸನ್ನ ಶಿಕ್ಷಣ ಸಮೂಹ ವಿದ್ಯಾಸಂಸ್ಥೆಗಳು ಲಾಯಿಲ , ಲಯನ್ಸ್ ಕ್ಲಬ್, ರೋಟರಿ ಕ್ಲಬ್, ಕೆ ಎಂ ಸಿ ಆಸ್ಪತ್ರೆ ಮಂಗಳೂರು ಮತ್ತು ಊರವರ ಸಹಭಾಗಿತ್ವದಲ್ಲಿ ನಡೆದ ಬೃಹತ್ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಪ್ರತೀ ವರ್ಷ ಕೆಂಪೇಗೌಡ ಜಯಂತಿ ಆಚರಣೆ ಪ್ರಯುಕ್ತ ರಕ್ತದಾನ ಎಂಬ ಶ್ರೇಷ್ಠ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಈ ಕಾರ್ಯಕ್ರಮ ಯಶ್ವಸಿಯಾಗಲಿ ಎಂದು ಶುಭಹಾರೈಸಿದರು.
ಶಿವಕಾಂತ ಗೌಡ ಉದ್ಯಮಿಗಳು ಎಸ್. ಪಿ. ಆಯಿಲ್ ಮಿಲ್ ಹಳೆಪೇಟೆ ಉಜಿರೆ ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಗಳಾಗಿ ಸುಂದರ ಗೌಡ ಇಚ್ಚಿಲ ಅಧ್ಯಕ್ಷರು, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ (ನಿ) ಉಜಿರೆ, ಬಾಲಕೃಷ್ಣ ಗೌಡ ಕೇರಿಮಾರ್, ಅಧ್ಯಕ್ಷರು ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ, ಸುಧಾಕರ ಗೌಡ, ಅಧ್ಯಕ್ಷರು ಒಕ್ಕಲಿಗ ಗೌಡರ ಯುವ ವೇದಿಕೆ ಅಪರ್ಣಾ ಶಿವಕಾಂತ ಗೌಡ, ಅಧ್ಯಕ್ಷರು ಒಕ್ಕಲಿಗ ಗೌಡರ ಮಹಿಳಾ ವೇದಿಕೆ, ದಿನೇಶ್ ಕುಮಾರ್ ಕೆ., ಮುಖ್ಯಕಾರ್ಯನಿರ್ವಾಹಣಾಧಿಕಾರಿ, ದೇವಿಪ್ರಸಾದ್ ಬೊಳ್ಮೆ, ಅಧ್ಯಕ್ಷರು ಲಯನ್ಸ್ ಕ್ಲಬ್, ಬೆಳ್ತಂಗಡಿ, ಉಮೇಶ್ ಶೆಟ್ಟಿ, ಅಧ್ಯಕ್ಷರು ಲಯನ್ಸ್ ಕ್ಲಬ್, ಬೆಳ್ತಂಗಡಿ ದುರ್ಗಾಫರ್ನಿಚರ್ ಉಜಿರೆ, ಜಗದೀಶ್ ಪ್ರಸಾದ್, ಪೂರ್ವಾಧ್ಯಕ್ಷರು ರೋಟರಿ ಕ್ಲಬ್ ಬೆಳ್ತಂಗಡಿ, ಡಾ. ನಿಖಿತಾ, ಕೆ.ಎಂ.ಸಿ ಆಸ್ಪತ್ರೆ ಮಂಗಳೂರು ಸೇರಿದಂತೆ ಇನ್ನೂ ಅನೇಕರು ಉಪಸ್ಥಿತರಿದ್ದರು.