ಜು.6 : ಬೆಳ್ತಂಗಡಿ ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ: ಜು.16 ಪರಿಸರ ಜಾಗೃತಿ ಹಾಗು ಸಂವರ್ಧನೆ ಅಭಿಯಾನ: ಪಕ್ಷಿಮ ಘಟ್ಟದ ತಪ್ಪಲಿನಲ್ಲಿ ಮಳೆ ನಡಿಗೆ: ಹಣ್ಣಿನ ಬೀಜಗಳ ಬಿತ್ತನೆ..!

ಬೆಳ್ತಂಗಡಿ : ರೋಟರಿ ಕ್ಲಬ್ ಬೆಳ್ತಂಗಡಿ ಇದರ ನೂತನ ಅಧ್ಯಕ್ಷರ ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಜು.6 ರಂದು ಉಜಿರೆ ಕೃಷ್ಣಾನುಗ್ರಹ ಸಭಾ ಭವನದಲ್ಲಿ ನಡೆಯಲಿದೆ ಎಂದು ನಿಯೋಜಿತ ಅಧ್ಯಕ್ಷ ಅನಂತ ಭಟ್ ಮಚ್ಚಿಮಲೆ ಹೇಳಿದರು.

ಅವರು ಜು.3 ರಂದು ಬೆಳ್ತಂಗಡಿ ಪತ್ರಿಕಾ ಭವನದಲ್ಲಿ ಕರೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದರು.
ಬೆಳ್ತಂಗಡಿ ರೋಟರಿ ಕ್ಲಬ್ ಕಳೆದ 52 ವರ್ಷಗಳಲ್ಲಿ ಸಮುದಾಯದ ಅಗತ್ಯಗಳಿಗೆ ಸ್ಪಂದಿಸಿ ಜನಪರ ಕೆಲಸದ ಮೂಲಕ ಮಾದರಿ ಸಂಸ್ಥೆಯಾಗಿ ಬೆಳೆದಿದೆ. ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ಪರಿಸರ ಸಂವರ್ಧನಾ ಅಭಿಯಾನ, ಆರೋಗ್ಯ ಜಾಗೃತಿ ಶಿಬಿರ, ಮಹಿಳಾ ಸಬಲೀಕರಣ ಕಾರ್ಯಕ್ರಮಗಳು, ಮಕ್ಕಳ ಅಭಿವೃದ್ಧಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಈ ಬಾರಿ ಪರಿಸರ ಜಾಗೃತಿ ಹಾಗು ಸಂವರ್ಧನೆ ನಿಟ್ಟೆನಲ್ಲಿ ಜು.16 ರಂದು ಪಕ್ಷಿಮ ಘಟ್ಟದ ತಪ್ಪಲಿನಲ್ಲಿ ಮಳೆ ನಡಿಗೆಯೊಂದಿಗೆ ಹಣ್ಣಿನ ಬೀಜಗಳ ಬಿತ್ತನೆ ಆಯೋಜಿಸಲಾಗಿದೆ. ಈ ವರ್ಷದ ಕಾರ್ಯಕ್ರಮವಾಗಿ ರಾಜ್ಯ ಮಟ್ಟದ ಕೃಷಿ ವಿಚಾರ ಸಂಕೀರ್ಣ, ಹಾಗು ಹಣ್ಣಿನ ಮೇಳ ನಡೆಸಲಾಗುವದು ಎಂದರು.
ಪತ್ರಿಕಾ ಗೋಷ್ಠಿಯಲ್ಲಿ ರೋಟರಿ ಕ್ಲಬ್ ನಿಯೋಜಿತ ಕಾರ್ಯದರ್ಶಿ ವಿದ್ಯಾ ಕುಮಾರ್ ಕಂಚೋಡು, ವಲಯ ಸೇನಾನಿ ಯಶವಂತ ಪಟವರ್ಧನ್, ಮಾಜಿ ಅಧ್ಯಕ್ಷ ಧನಂಜಯ ರಾವ್ ಉಪಸ್ಥಿತರಿದ್ದರು

error: Content is protected !!