‘ನನ್ನವ್ವ ಬದುಕಿದ್ದು, ಕಾಳುಕಡ್ಡಿಗೆ, ದುಡಿತಕ್ಕೆ, ಮಕ್ಕಳಿಗೆ; ಮೇಲೊಂದು ಸೂರು, ಅನ್ನ, ರೊಟ್ಟಿ, ಹಚ್ಚಡಕ್ಕೆ’: ಪಿ.ಲಂಕೇಶ್ ಮಾತು ಉಲ್ಲೇಖಿಸಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಯೋಜನೆಗಳ ಬಜೆಟ್ ಮಂಡನೆ: ಮಹಿಳಾ ಸಬಲೀಕರಣಕ್ಕಾಗಿ ಮಹತ್ತರ ನಿರ್ಧಾರ : ಆಸಿಡ್ ದಾಳಿ ಸಂತ್ರಸ್ತರನ್ನು ಮುಖ್ಯ ವಾಹಿನಿಗೆ ತರಲು ಬಡ್ಡಿ ರಹಿತಸಾಲ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಹಾಗೂ ಶಕ್ತಿ ಯೋಜನೆಯಡಿ ರಾಜ್ಯದ ಮಹಿಳೆಯರಿಗೆ ಅನುಕೂಲಗಳನ್ನು ಕಲ್ಪಿಸಿದ ರಾಜ್ಯ ಸರ್ಕಾರ 2023-24ರ ಬಜೆಟ್ ನಲ್ಲಿ ಮಹಿಳಾ ಸಬಲೀಕರಣಕ್ಕಾಗಿ ಮತ್ತಷ್ಟು ಒತ್ತು ನೀಡಿದೆ.

‘ನನ್ನವ್ವ ಬದುಕಿದ್ದು, ಕಾಳುಕಡ್ಡಿಗೆ, ದುಡಿತಕ್ಕೆ, ಮಕ್ಕಳಿಗೆ; ಮೇಲೊಂದು ಸೂರು, ಅನ್ನ, ರೊಟ್ಟಿ, ಹಚ್ಚಡಕ್ಕೆ; ಸರೀಕರ ಎದುರು ತಲೆಯೆತ್ತಿ ನಡೆಯಲಿಕ್ಕೆ’ ಎಂದು ಪಿ.ಲಂಕೇಶ್ ಅವರ ಮಾತನ್ನು ಇದೇ ವೇಳೆ ಉಲ್ಲೇಖಿಸಿ ಮಹಿಳಾ ಮತ್ತು ಕಲ್ಯಾಣ ಇಲಾಖೆಗೆ 232 ಕೋಟಿ ರೂ. ಮೀಸಲಿರಿಸಿದೆ

ಮಹಿಳಾ ಸಬಲೀಕರಣದ ಯೋಜನೆಗಳು

ಗೃಹಲಕ್ಷ್ಮಿ ಯೋಜನೆ ಮೂಲಕ ಮಹಿಳೆಯರ ಖಾತೆಗೆ ನೇರವಾಗಿ ಮಾಸಿಕ 2 ವರ್ಗಾಯಿಸಲಾಗುವುದು. ಈ ಯೋಜನೆಗಾಗಿ ವಾರ್ಷಿಕವಾಗಿ ಸುಮಾರು 30,000 ಕೋಟಿ ವೆಚ್ಚವಾಗಲಿದೆ.

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಮೂಲಕ ಐದು ಲಕ್ಷ ರೂ.ಗಳವರೆಗೆ ಬಡ್ಡಿ ರಹಿತ ಸಾಲ ಸೌಲಭ್ಯ ಒದಗಿಸಲು ಎರಡು ಕೋಟಿ ರೂ. ಅನುದಾನ ಮತ್ತು ರಾಜೀವ್ ಗಾಂಧಿ ವಸತಿ ನಿಗಮದ ಮೂಲಕ ವಸತಿ ಸೌಲಭ್ಯವನ್ನು ಒದಗಿಸಲಾಗುವುದು.

ಮಹಿಳಾ ಉದ್ಯಮಿಗಳು ಆತಿತ್ಯ ಆರೈಕೆ ಮತ್ತು ಪ್ರವಾಸೋದ್ಯಮದಂತ ಸೇವಾ ವಲಯದಲ್ಲಿ ಹೆಚ್ಚಿನ ಅವಕಾಶ ಪಡೆಯುತ್ತಿದ್ದು ರಾಜ್ಯ ಹಣಕಾಸು ಸಂಸ್ಥೆ ಮೂಲಕ ಶೇಕಡ ನಾಲ್ಕರ ಬಡ್ಡಿ ದರದಲ್ಲಿ ನೀಡಲಾಗುವ ಸಾಲದ ಮಿತಿಯನ್ನು ಎರಡು ಕೋಟಿ ರೂಗಳಿಂದ 5 ಕೋಟಿ ರೂ.ಗಳಿಗೆ ವಿಸ್ತರಣೆ ಮಾಡಲಾಗುವುದು.

ಮಹಿಳೆಯರ ಸುರಕ್ಷತೆಗಾಗಿ ಹೊಸದಾಗಿ 5 ಕಾನೂನು ಸುವ್ಯವಸ್ಥೆ ಪೊಲೀಸ್ ಠಾಣೆ ಮತ್ತು 6 ಸಂಚಾರ ಮಹಿಳಾ ಪೊಲೀಸ್ ಠಾಣೆಗಳನ್ನು ಸ್ಥಾಪಿಸಲಾಗುವುದು.

ಮೀಸಲು ವಿಕಲಚೇತನರಿಗಾಗಿ ಆರ್ಥಿಕವಾಗಿ ಸಾಮಾಜಿಕವಾಗಿ ಸದೃಢತೆಯನ್ನು ಒದಗಿಸಲು ಇಲಾಖೆಯಲ್ಲಿ ನೋಂದಣಿಯಾಗಿರುವ ಸುಮಾರು ನಾಲ್ಕು ಸಾವಿರ ವಿಶೇಷ ಚೇತನರಿಗೆ ಯಂತ್ರ ಚಾಲಿತ ದ್ವಿಚಕ್ರ ವಾಹನಗಳನ್ನು 30 ಕೋಟಿ ರೂ ವೆಚ್ಚದಲ್ಲಿ ಒದಗಿಸಲಾಗುವುದು.

2023- 24ನೇ ಸಾಲಿನಲ್ಲಿ 10 ಬುದ್ದಿಮಾಂದ್ಯ ಮಕ್ಕಳ ವಸತಿ ಶಾಲೆಯನ್ನು ಏಳು ಜಿಲ್ಲೆಗಳಲ್ಲಿ ಎನ್‌ಜಿಒ ಸಹಾಯದೊಂದಿಗೆ ಎರಡು ಕೋಟಿ ರೂ. ವೆಚ್ಚದಲ್ಲಿ ಪ್ರಾರಂಭಿಸಲಾಗುವುದು.

ರಾಜ್ಯದಲ್ಲಿನ ಆಸಿಡ್ ದಾಳಿ ಸಂತ್ರಸ್ತರನ್ನು ಸಮಾಜದ ಮುಖ್ಯ ವಾಹಿನಿಗೆ ತರುವ ಉದ್ದೇಶದಿಂದ ಇವರಿಗೆ ಸ್ವಯಂ ಉದ್ಯೋಗಕ್ಕಾಗಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಮೂಲಕ ಐದು ಲಕ್ಷ ರೂ.ಗಳವರೆಗೆ ಬಡ್ಡಿ ರಹಿತ ಸಾಲ ಸೌಲಭ್ಯ ಒದಗಿಸಲು ಎರಡು ಕೋಟಿ ರೂ. ಅನುದಾನ ಮತ್ತು ರಾಜೀವ್ ಗಾಂಧಿ ವಸತಿ ನಿಗಮದ ಮೂಲಕ ವಸತಿ ಸೌಲಭ್ಯವನ್ನು ಒದಗಿಸಲಾಗುವುದು.

ಪ್ರಸಕ್ತ ಸಾಲಿನಲ್ಲಿ ಮಹಿಳಾ ಉದ್ದೇಶಿತ ಯೋಜನೆಗಳಿಗೆ 70,427 ಕೋಟಿ ರೂ. ಆಯವ್ಯಯ ನಿಗದಿಪಡಿಸಲಾಗಿದೆ.
ಮಕ್ಕಳ ಉದ್ದೇಶಿತ ಯೋಜನೆಗಳಿಗೆ 2023- 24 ನೇ ಸಾಲಿನಲ್ಲಿ 51,229 ಕೋಟಿ ರೂ. ಅನುದಾನ ಒದಗಿಸಲಾಗಿದೆ.

ನವಜಾತ ಶಿಶು, ಮಕ್ಕಳು, ಮಹಿಳೆಯರಲ್ಲಿ ರಕ್ತಹೀನತೆ, ಅಪೌಷ್ಟಿಕತೆ ನಿವಾರಿಸಲು ಸಮಗ್ರ ಪರೀಕ್ಷೆ, ಚಿಕಿತ್ಸೆ ಅರಿವು ಮೂಡಿಸಲು 25 ಕೋಟಿ ರೂ. ಅನುದಾನ ನೀಡಲಾಗುವುದು.

ಮಹಿಳೆಯರ ಸುರಕ್ಷತೆಗಾಗಿ ಹೊಸದಾಗಿ 5 ಕಾನೂನು ಸುವ್ಯವಸ್ಥೆ ಪೊಲೀಸ್ ಠಾಣೆ ಮತ್ತು 6 ಸಂಚಾರ ಮಹಿಳಾ ಪೊಲೀಸ್ ಠಾಣೆಗಳನ್ನು ಸ್ಥಾಪನೆ ಮಾಡಲಾಗುವುದು.

error: Content is protected !!