ಬೆಳ್ತಂಗಡಿ:-ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ದಿಗಂಬರ ಜೈನಮುನಿ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮುನಿ ಮಹಾರಾಜರ ಕೊಲೆ ಬಗ್ಗೆ ತನಿಖೆ ನಡೆಸಿ ನ್ಯಾಯ ಒದಗಿಸಿ ಕೊಡುವಂತೆ ಆಗ್ರಹಿಸಿ ಶ್ರೀ ಕ್ಷೇತ್ರ ಚಂದ್ರಪುರ ಭಗವಾನ್ 1008 ಶ್ರೀ ಚಂದ್ರನಾಥ ಸ್ವಾಮಿ ಜಿನ ಮಂದಿರ,ಶಿಶಿಲ ಇದರ ಆಡಳಿತ ಮಂಡಳಿಯ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿಯನ್ನು ನೀಡಿದರು. ದಿಗಂಬರ್ ಜೈನ ಮುನಿಗಳನ್ನು ಅತ್ಯಂತ ಕ್ರೂರವಾಗಿ ಕೊಲೆ ಮಾಡಿರುವುದು ಖಂಡನೀಯ ಹಾಗೂ ಇಡೀ ರಾಜ್ಯಕ್ಕೆ ಕಪ್ಪು ಚುಕ್ಕೆಯಾಗಿದೆ. ಆಹಿಂಸೆ ಮತ್ತು ಬದುಕು ಮತ್ತು ಬದುಕಲು ಬಿಡು ಎಂಬ ತತ್ವವನ್ನು ಸದಾ ಬದುಕಿನಲ್ಲಿ ಪಾಲಿಸುವ ಜೈನರು ಸದಾ ಸಂಯಮದಿಂದ ಪವಿತ್ರ ಜೀವನ ನಡೆಸುತ್ತಾರೆ. ದಿಗಂಬರ ಮುನಿಗಳಂತೂ ಸರ್ವಸ್ವವನ್ನೂ ತ್ಯಾಗ ಮಾಡಿ ಆತ್ಮ ಕಲ್ಯಾಣದೊಂದಿಗೆ ಲೋಕಕಲ್ಯಾಣಕ್ಕಾಗಿ ಕಠಿಣ ವೃತ ನಿಯಮಗಳನ್ನು ಪಾಲಿಸಿ ಧರ್ಮಪ್ರಭಾವನೆ ಮಾಡುತ್ತಾರೆ.ಅಂತಹ ಪವಿತ್ರ ಹಾಗೂ ಪೂಜ್ಯ ಮುನಿಗಳ ಕೊಲೆ ಮಾಡಿರುವುದು ಅತ್ಯಂತ ಖಂಡನೀಯವಾಗಿದೆ. ಈ ಬಗ್ಗೆ ತಕ್ಷಣ ತನಿಖೆ ನಡೆಸಿ ನ್ಯಾಯ ಒದಗಿಸಿ ಆರೋಪಿಗಳನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕಾಗಿ ಹಾಗೂ ಕರ್ನಾಟಕ ರಾಜ್ಯದ ಸಮಸ್ತ ಮುನಿಗಳಿಗೆ ಸೂಕ್ತ ರಕ್ಷಣೆ ಒದಗಿಸಬೇಕಾಗಿ ಜೈನ ಸಮಾಜದ ಹಾಗೂ ರಾಜ್ಯದ ಜನತೆಯ ಪರವಾಗಿ ವಿನಂತಿಸಿಕೊಳ್ಳುತಿದ್ದೇವೆ. ಎಂದು ಮನವಿ ಮಾಡಿದ್ದಾರೆ.ಈ ಸಂದರ್ಭದಲ್ಲಿ ಸಮಿತಿಯ ಪದಾಧಿಕಾರಿಗಳು ಸದಸ್ಯರು ಉಪಸ್ಥಿತರಿದ್ದರು.