ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಮಂಗಳೂರು ಪ್ರಾದೇಶಿಕ ಅರಣ್ಯ ವಿಭಾಗ, ಪುತ್ತೂರು ಉಪವಿಭಾಗ, ಉಪ್ಪಿನಂಗಡಿ ವಲಯ ಇದರ ಸಂಯುಕ್ತ ಆಶ್ರಯದಲ್ಲಿ ರಾಜ್ಯಾದ್ಯಂತ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ “ದಶಲಕ್ಷ ಗಿಡಗಳ ನಾಟಿ” ಮತ್ತು ಕರ್ನಾಟಕ ಸರಕಾರದ ಅರಣ್ಯ ಇಲಾಖೆಯ “ಕೋಟಿ ವೃಕ್ಷ ಆಂದೋಲನ” ದ ಪ್ರಯುಕ್ತ ಜುಲೈ 09 ರಂದು ಬೆಳ್ತಂಗಡಿ ತಾಲೂಕಿನ ಪುರುಷರ ಮಜಲು ಪರಿಸರದ ತಣ್ಣೀರುಪಂತ ಮೀಸಲು ಅರಣ್ಯ ಪ್ರದೇಶದಲ್ಲಿ ಅರಣ್ಯೀಕರಣ ಕಾರ್ಯಕ್ರಮಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಗಿಡ ನೆಡುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮುಖ್ಯ ನಿರ್ವಹಣಾಧಿಕಾರಿಗಳಾದ ಅನಿಲ್ ಕುಮಾರ್ ಎಸ್.ಎಸ್.ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕ ವಿವೇಕ್ .ವಿ. ಪಾಯ್ಸ್ , ಸೇರಿದಂತೆ ಅರಣ್ಯ ಇಲಾಖೆಯ ಅಧಿಕಾರಿಗಳು, ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರು, ಊರವರು ಉಪಸ್ಥಿತರಿದ್ದರು. ತಣ್ಣೀರುಪಂತ ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದ ವಠಾರದಲ್ಲಿ ವಿವಿಧ ಗಣ್ಯರ ಉಪಸ್ಥಿತಿಯಲ್ಲಿ ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.