ವೇಣೂರು ಕೊರಗಜ್ಜನ ಗುಡಿಗೆ ಬೆಂಕಿ ಪ್ರಕರಣ : ಸ್ಥಳಕ್ಕೆ ಬೆಳ್ತಂಗಡಿ ತಹಶೀಲ್ದಾರ್ ಭೇಟಿ ಪ್ರವೇಶ ನಿರ್ಬಂಧ: ಆರೋಪಿಯನ್ನು ವಶಕ್ಕೆ ಪಡೆದ ವೇಣೂರು ಪೊಲೀಸರು:

 

 

ಬೆಳ್ತಂಗಡಿ: ಭೂಮಿ ವಿಚಾರಕ್ಕೆ ಗಲಾಟೆ ನಡೆದು ಕಾರ್ಣಿಕ ದೈವ ಕೊರಗಜ್ಜನ ಗುಡಿಗೇ ವ್ಯಕ್ತಿಯೊಬ್ಬ ಬೆಂಕಿ ಹಚ್ಚಿದ ಘಟನೆ ವೇಣೂರು ಗ್ರಾಮದ ಬಾಡಾರಿನ ಕೊರಗಕಲ್ಲು ಬಳಿಯ ಕೊರಗಜ್ಜನ ಕಟ್ಟೆಯಲ್ಲಿ ಜು 11 ಮಂಗಳವಾರ ನಡೆದಿದ್ದು ಸ್ಥಳೀಯರು ಸೇರಿ ಹಲವಾರು ಮಂದಿ ತನಿಖೆಗೆ ಆಗ್ರಹಿಸಿದ್ದಾರೆ. ಸ್ಥಳಕ್ಕೆ ವೇಣೂರು ಪೊಲೀಸರು ಹಾಗೂ ಬೆಳ್ತಂಗಡಿ ತಹಶೀಲ್ದಾರ್ ಭೇಟಿ ನೀಡಿ ಮುಂದಿನ ಆದೇಶದವರೆಗೆ ವಿವಾದಿತ ಸ್ಥಳದ ಸುತ್ತಮತ್ತ ಪ್ರವೇಶ ನಿರ್ಬಂಧಿಸಿ ನಿಷೇದಾಜ್ಙೆ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.ಪ್ರಕರಣದ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಹರೀಶ್ ಮೇಲೆ ಪ್ರಕರಣ ದಾಖಲಾಗಿದ್ದು.ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಪ್ರಕರಣದ ಹಿನ್ನೆಲೆ:
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಗ್ರಾಮದ ಬಾಡಾರಿನ ಕೊರಗಕಲ್ಲು ಬಳಿ ಕೊರಗಜ್ಜನ ಕಟ್ಟೆ ಇದೆ. ಸಾರ್ವಜನಿಕರು ಸಮಿತಿ ರಚಿಸಿ ವರ್ಷಂಪ್ರತಿ ಕೊರಗಜ್ಜನ ಆರಾಧನೆ ಮಾಡುತ್ತಿದ್ದರು. ಆದರೆ ಕೊರಗಜ್ಜನ ಗುಡಿ ಇರುವ ಜಾಗದ ಬಗ್ಗೆ ಸ್ಥಳೀಯ ವ್ಯಕ್ತಿ ಆಕ್ಷೇಪ ವ್ಯಕ್ತಪಡಿಸಿದ್ದರು. ಗುಡಿ ಇರುವ ಜಾಗ ಖಾಸಗಿ ಕುಟುಂಬಸ್ಥರದ್ದು, ಸಾರ್ವಜನಿಕ ಹಸ್ತಕ್ಷೇಪ ಮಾಡಬಾರದೆಂದು ತಗಾದೆ ಎತ್ತಿದ್ದರು. ಈ ತಗಾದೆ ಕೆಲವು ವರ್ಷಗಳಿಂದ ಏರ್ಪಟ್ಟಿತ್ತು. ಆದರೀಗ ಆ ವ್ಯಕ್ತಿ ಗುಡಿಗೆ ಬೆಂಕಿ ಹಚ್ಚಿದ್ದು, ಇದನ್ನು ಖಂಡಿಸಿದ ಸ್ವಾಮಿ ಕೊರಗಜ್ಜ ಸಮಿತಿಯು ವೇಣೂರು ಪೊಲೀಸ್ ಠಾಣೆಗೆ ದೂರು ನೀಡಿದ್ದರು.

error: Content is protected !!