ಬೆಳ್ತಂಗಡಿ: 3 ಪಿಕಪ್ ವಾಹನದಲ್ಲಿ 8 ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸಾಗಾಟ ಮಾಡುತಿದ್ದವರನ್ನು ಧರ್ಮಸ್ಥಳ ಪೊಲೀಸರು ಪತ್ತೆ ಹಚ್ಚಿ ಜಾನುವಾರು ಸಹಿತ ನಾಲ್ವರನ್ನು ಬಂಧಿಸಿದ್ದಾರೆ.
ಜು.12ರಂದು ಧರ್ಮಸ್ಥಳ ಗ್ರಾಮದ ಕನ್ಯಾಡಿ ರಾಮ ಮಂದಿರದ ಬಳಿ ಧರ್ಮಸ್ಥಳ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ಅನಿಲಕುಮಾರ್ ಡಿ ಹಾಗೂ ಸಿಬ್ಬಂದಿಗಳು ವಾಹನ ತಪಾಸಣೆ ಮಾಡುತ್ತಿದ್ದ ಸಂದರ್ಭದಲ್ಲಿ ಇಂದಬೆಟ್ಟು ಮತ್ತು ನಾವೂರು ಪರಿಸರದಿಂದ ಜಾನುವಾರುಗಳನ್ನು ಖರೀದಿಸಿ ಹಾಸನ ಕಡೆಗೆ ಮಾರಾಟ ಮಾಡಲೆಂದು 3 ಪಿಕಪ್ ವಾಹನದಲ್ಲಿ 8 ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸಾಗಿಸುತ್ತಿದ್ದಾಗ ಪೊಲೀಸರು ತಡೆದು ಆರೋಪಿಗಳನ್ನು ಸೆರೆಹಿಡಿದಿದ್ದಾರೆ. ಈ ವೇಳೆ ಒಟ್ಟು ಸುಮಾರು 7,65,000 ರೂ ಮೌಲ್ಯದ ಸೊತ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆರೋಪಿಗಳನ್ನು ಹಾಸನ ಜಿಲ್ಲೆಯ ಚೆನ್ನಕೇಶವ,ಬೆಳ್ತಂಗಡಿ ತಾಲೂಕು ನಾವೂರು ಗ್ರಾಮದ ಪುಷ್ಪರಾಜ್ , ಬೂತ್ ಸಮಿತಿ ಅಧ್ಯಕ್ಷ ಪ್ರಮೋದ್ ಸಾಲ್ಯಾನ್ ಮೋರ್ತಾಜೆ , ಹಾಗೂ ಹೊಳೇನರಸಿಪುರ ತಾಲೂಕಿನ ಸಂದೀಪ್ ಎಂದು ಗುರುತಿಸಲಾಗಿದೆ.