ಬೆಳ್ತಂಗಡಿ: ನೆರಿಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ಮಶಾನ ಇಲ್ಲದಿರುವ ಬಗ್ಗೆ ಗ್ರಾಮಸ್ಥರು ಮೃತ ದೇಹ ಇಟ್ಟು ಪ್ರತಿಭಟನೆ ನಡೆಸುತಿದ್ದು. ಬೆಳ್ತಂಗಡಿ ತಹಶೀಲ್ದಾರ್ ಸ್ಥಳಕ್ಕೆ ಭೇಟಿ ನೀಡಿದಾಗ ಇವತ್ತೇ ಸ್ಮಶಾನಕ್ಕೆ ಜಾಗ ಗುರುತಿಸಿಕೊಡಬೇಕು ಅದೇ ಜಾಗದಲ್ಲಿ ಮೃತದೇಹದ ಅಂತ್ಯ ಸಂಸ್ಕಾರ ಮಾಡುವುದಾಗಿ ಗ್ರಾಮಸ್ಥರು ಪಟ್ಟು ಹಿಡಿದಿದ್ದಾರೆ.ಈಗಾಗಲೇ ಇಟ್ಟಾಡಿ ಎಂಬಲ್ಲಿ ಸ್ಮಶಾನಕ್ಕಾಗಿ ಜಾಗ ಮೀಸಲಿರಿಸಿದ ಸ್ಥಳವನ್ನು ತಹಶೀಲ್ದಾರ್ ಹಾಗೂ ಅಧಿಕಾರಿಗಳು ಪರಿಶೀಲಿಸುವ ಸಂದರ್ಭ ಸ್ಥಳೀಯ ಕೆಲವರು ಆ ಜಾಗದಲ್ಲಿ ಸ್ಮಶಾನ ಮಾಡಲು ವಿರೋಧ ವ್ಯಕ್ತಪಡಿಸಿದರಲ್ಲದೇ ಯಾವುದೇ ಕಾರಣಕ್ಕೂ ಅಂತ್ಯ ಸಂಸ್ಕಾರಕ್ಕೆ ಅವಕಾಶ ಕೊಡುವುದಿಲ್ಲ ಎಂದು ರಸ್ತೆಗೆ ಅಡ್ಡಲಾಗಿ ಕೂತಾಗ ಸ್ವಲ್ಪ ಹೊತ್ತು ಗೊಂದಲದ ವಾತಾವರಣ ನಿರ್ಮಾಣವಾಗಿದೆ. ಈ ಸಂದರ್ಭದಲ್ಲಿ ಗ್ರಾಮಸ್ಥರು ಪಂಚಾಯತ್ ಮುಂಭಾಗದಲ್ಲಿ ಅಂತ್ಯವಸಂಸ್ಕಾರಕ್ಕೆ ಮುಂದಾಗಿದ್ದಾರೆ. ಅಧಿಕಾರಿಗಳು ಗ್ರಾಮಸ್ಥರೊಂದಿಗೆ ಮಾತುಕತೆ ನಡೆಸುತಿದ್ದು ಇನ್ನೂ ಕೂಡ ಸಮಸ್ಯೆಗೆ ಪರಿಹಾರ ಸಿಕ್ಕಿಲ್ಲ.