ವೀರೇಂದ್ರ ಹೆಗ್ಗಡೆ ಕುಟುಂಬದ ವಿರುದ್ಧ ಆಧಾರ ರಹಿತ ಆರೋಪ: ಆರೋಪ ಹಾಗೂ ಸುದ್ಧಿ ಪ್ರಕಟಿಸದಂತೆ, ನ್ಯಾಯಾಲಯದಿಂದ ನಿರ್ಬಂಧಕಾಜ್ಙೆ:

 

 

ಬೆಂಗಳೂರು: ಧರ್ಮಸ್ಥಳ ದೇವಾಲಯ ಸೇರಿದಂತೆ ವೀರೇಂದ್ರ ಹೆಗ್ಗಡೆ ಮತ್ತವರ ಕುಟುಂಬ ಸದಸ್ಯರು ಹಾಗೂ ಅವರ ನೇತೃತ್ವದ ಸಂಸ್ಥೆಗಳ ವಿರುದ್ಧ ಆಧಾರ ರಹಿತ ಆರೋಪ ಮಾಡುವುದು ಹಾಗೂ ವರದಿ ಪ್ರಕಟಿಸದಂತೆ ಬೆಂಗಳೂರಿನ ಪ್ರಧಾನ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ನಿರ್ಬಂಧಕಾಜ್ಞೆ ನೀಡಿ ಆದೇಶ ಹೊರಡಿಸಿದೆ.

ಧರ್ಮಸ್ಥಳ ದೇವಾಲಯ, ದೇವಾಲಯದ ಅಧೀನಕ್ಕೊಳಪಟ್ಟ ಶಿಕ್ಷಣ ಸಂಸ್ಥೆಗಳು ಹಾಗೂ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರ ವಿರುದ್ಧ ಯಾವುದೇ ರೀತಿಯ ಆಧಾರ ರಹಿತ ಆರೋಪಗಳನ್ನು ಮಾಡದಂತೆ ನಿರ್ಬಂಧ ಹೇರಬೇಕು ಎಂದು ಕೋರಿ ಶೀನಪ್ಪ ಮತ್ತಿತರರು ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ ಪ್ರಧಾನ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಈ ಆದೇಶ ಮಾಡಿದೆ.ಅಲ್ಲದೆ, ಈ ಸಂಬಂಧ ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್, ವಾಟ್ಸಪ್, ಟ್ವಿಟರ್, ಇನ್ಸ್ಟಾಗ್ರಾಮ್, ಯೂಟ್ಯೂಬ್, ಟಿವಿ ಚಾನಲ್ ಮತ್ತು ಯಾವುದೇ ಸಾಮಾಜಿಕ ಜಾಲತಾಣಗಳಲ್ಲಿ ಸೌಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಡಿ. ವೀರೇಂದ್ರ ಹೆಗ್ಗಡೆ ಮತ್ತು ಅವರು ನಡೆಸುತ್ತಿರುವ ಸಂಸ್ಥೆಗಳ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡದಂತೆ ನಿರ್ಬಂಧಕಾಜ್ಞೆ ನೀಡಿದೆ.

ಜತೆಗೆ, ಒಂದು ವೇಳೆ ಈಗಾಗಲೇ ಟಿವಿ ಚಾನಲ್‌ಗಳು, ಫೇಸ್‌ಬುಕ್, ವಾಟ್ಸಾಪ್, ಟ್ವಿಟರ್, ಇನ್ಸ್ಟಾಗ್ರಾಮ್, ಯೂಟ್ಯೂಬ್‌ಗಳಲ್ಲಿ ಅವಹೇಳನಕಾರಿಯಾಗಿ ಪ್ರಸಾರವಾಗಿರುವ ಅಥವಾ ಹಂಚಿಕೊಂಡಿದ್ದಲ್ಲಿ ತಕ್ಷಣ ಅವುಗಳನ್ನು ತೆಗೆದು ಹಾಕುವಂತೆ ಆದೇಶ ಮಾಡಲಾಗಿದೆ. ಮಹೇಶ್ ಶೆಟ್ಟಿ ತಿಮರೋಡಿ, ಜಗದೀಶ್, ಪ್ರಭಾ ಬೆಳಹೊಂಗಳ, ಸೋಮನಾಥ್ ನಾಯಕ್, ಬಿ ಎಂ ಭಟ್, ವಿಠಲ ಗೌಡ ಮತ್ತು ಮಾಧ್ಯಮ ಸಂಸ್ಥೆಗಳು ಹಾಗೂ ಸಾಮಾಜಿಕ ಜಾಲತಾಣಗಳನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.

error: Content is protected !!