ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಮುಂದುವರಿದಿದ್ದು ಜುಲೈ 26 ಬುಧವಾರವೂ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಬುಧವಾರವೂ ಭಾರೀ ಮಳೆಯಾಗುವ ನಿರೀಕ್ಷೆ ಇರುವುದರಿಂದ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಜು.26 ಬುಧವಾರ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.