ಬೆಳ್ತಂಗಡಿ: ಪಾಂಗಳ ನಿವಾಸಿ, ಉಜಿರೆ ಎಸ್.ಡಿ.ಎಂ ಕಾಲೇಜ್ ವಿದ್ಯಾರ್ಥಿನಿ ಕು. ಸೌಜನ್ಯಾಳ ಕೊಲೆ ಮತ್ತು ಅತ್ಯಾಚಾರ ಪ್ರಕರಣವನ್ನು ಮರು ತನಿಖೆ ನಡೆಸುವಂತೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸೌಜನ್ಯನ ಮನೆಯವರು ಮತ್ತು ಮಹೇಶ್ ಶೆಟ್ಟಿ ತಿಮರೋಡಿ ಜು.26ರಂದು ಮನವಿ ನೀಡಿದ್ದಾರೆ.
ಬೆಂಗಳೂರಿಗೆ ತೆರಳಿದ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಸೌಜನ್ಯಾಳ ತಂದೆ, ತಾಯಿ ಮತ್ತು ಮನೆಯವರು ಪ್ರಕರಣವನ್ನು ಸೂಕ್ತ ರೀತಿಯಲ್ಲಿ ಮರುತನಿಖೆ ಮಾಡುವಂತೆ, ಹಾಗೂ ನೈಜ ಆರೋಪಿಯನ್ನು ಪತ್ತೆಹಚ್ಚುವಂತೆ ಒತ್ತಾಯಿಸಿ ಮನವಿ ನೀಡಿದ್ದಾರೆ.