ಪದೇ-ಪದೇ ಸಂಚಾರ ನಿಯಮ ಉಲ್ಲಂಘಿಸುವವರಿಗೆ ಬಿಗ್ ಶಾಕ್..!: 222 ವಾಹನ ಚಾಲಕರ ಡಿಎಲ್ ರದ್ದುಗೊಳಿಸಲು ಪ್ರಾದೇಶಿಕ ಸಾರಿಗೆ ಕಚೇರಿಗೆ ಪ್ರಸ್ತಾವನೆ: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಖಡಕ್ ರೂಲ್ಸ್..!

ಮಂಗಳೂರು: ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸಂಚಾರ ನಿಯಮ ಉಲ್ಲಂಘಿಸಿರುವ 222 ವಾಹನ ಚಾಲಕರ ಚಾಲನಾ ಪರವಾನಗಿ ರದ್ದುಗೊಳಿಸಲು ಮಂಗಳೂರು ಪೊಲೀಸ್ ಕಮೀಷನರ್ ಕಚೇರಿಯಿಂದ ಪ್ರಾದೇಶಿಕ ಸಾರಿಗೆ ಕಚೇರಿಗೆ ಪ್ರಸ್ತಾವನೆ ಕಳುಹಿಸಲಾಗಿದೆ.

ಜುಲೈ 13ರಿಂದ 25ರವರೆಗೆ ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ಚಾಲನೆ ಮಾಡಿರುವ ಮತ್ತು ಸಂಚಾರ ನಿಯಮ ಪಾಲನೆ ಮಾಡದಿರುವ ಪ್ರಕರಣಗಳಲ್ಲಿ ಒಟ್ಟು 222 ಡಿಎಲ್ ಅಮಾನತುಪಡಿಸುವ ಕುರಿತು ಪ್ರಸ್ತಾವನೆ ಸಲ್ಲಿಸಲಾಗಿದೆ.

ಸುಪ್ರೀಂ ಕೋರ್ಟ್ ರಸ್ತೆ ಸುರಕ್ಷತಾ ಸಮಿತಿಯ ನಿರ್ದೇಶನದಂತೆ, ಪ್ರತಿನಿತ್ಯ ಭಾರತೀಯ ದಂಡ ಸಂಹಿತೆ 1860 ಹಾಗೂ ಭಾರತೀಯ ಮೋಟಾರು ವಾಹನ ಕಾಯ್ದೆ-1988/2019 ಅಡಿ ಸಂಚಾರ ನಿಯಮ ಉಲ್ಲಂಘಿಸುವ ವಾಹನ ಚಾಲಕರ ಡಿಎಲ್‌ಗಳನ್ನು ಅಮಾನತುಪಡಿಸಲು ಆದೇಶಿಸಿದೆ. ಈ ಹಿನ್ನಲೆ ಅತಿ ವೇಗ ಹಾಗೂ ನಿರ್ಲಕ್ಷ್ಯದಿಂದ ಚಾಲನೆ ಮಾಡಿರುವ 113 ಚಾಲಕರ ಡಿಎಲ್ ರದ್ದತಿ, ಮದ್ಯಸೇವಿಸಿ ಚಾಲನೆ – 1, ಸರಕು ಸಾಗಾಟದ ವಾಹನಗಳಲ್ಲಿ ಪ್ರಯಾಣಿಕರ ಸಾಗಾಟ 16, ವಾಹನ ಸಂಚಾರದಲ್ಲಿರುವಾಗಲೇ ಮೊಬೈಲ್ ಬಳಕೆ – 4, ಕೆಂಪು ಸಿಗ್ನಲ್ ಜಂಪಿಂಗ್ – 5, ಕಮರ್ಷಿಯಲ್ ವಾಹನಗಳಲ್ಲಿ ಅತಿ ಹೆಚ್ಚಿನ ಪ್ರಯಾಣಿಕರ ಸಾಗಾಟ – 4, ದ್ವಿಚಕ್ರ ವಾಹನಗಳಲ್ಲಿ ಮೂವರು ಪ್ರಯಾಣ – 3, ಹೆಲ್ಮೆಟ್ ಇಲ್ಲದೆ ಸಂಚಾರ – 59, ಸೀಟ್ ಬೆಲ್ಟ್ರಹಿತ ಪ್ರಯಾಣ – 17 ಪ್ರಕರಣಗಳಲ್ಲಿ ಡಿಎಲ್ ರದ್ದು ಮಾಡಲು ಪ್ರಸ್ತಾವನೆ ಸಲ್ಲಿಸಲಾಗಿದೆ.

error: Content is protected !!