ಧರ್ಮಸ್ಥಳ: ಹಿಂದೂ ಯುವತಿಗೆ ಡ್ರಾಪ್: ಆಟೋ ಚಾಲಕನ ಮೇಲೆ ಯುವಕರ ತಂಡದಿಂದ ಹಲ್ಲೆ..!

ಉಜಿರೆ : ಯುವತಿಯನ್ನು ಡ್ರಾಪ್ ಮಾಡಿದ್ದಕ್ಕೆ ಆಟೋ ಚಾಲಕನ ಮೇಲೆ ಹಲ್ಲೆ ನಡೆದ ಘಟನೆ ಧರ್ಮಸ್ಥಳ ಬಸ್ ನಿಲ್ದಾಣದ ಬಳಿ ನಡೆದಿದೆ.

ಬೆಂಗಳೂರಿನ ನಿವಾಸಿ ಹಿಂದೂ ವಿದ್ಯಾರ್ಥಿನಿಯೊಬ್ಬಳು ಉಜಿರೆ ಖಾಸಗಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿಕೊಂಡಿದ್ದು ಕಳೆದ ವಾರ ಕಾಲೇಜ್ ಕೊನೆಗೊಂಡಿದ್ದು, ಆ.02ರಂದು ರಾತ್ರಿ ತನ್ನ ಊರಾದ ಬೆಂಗಳೂರಿಗೆ ತೆರಳಲು ಉಜಿರೆಯಿಂದ ಪರಿಚಯಸ್ಥ ಅನ್ಯಕೋಮಿನ ಆಟೋ ಚಾಲಕನಿಗೆ ಕರೆ ಮಾಡಿದ್ದಳು. ಆತ ಬಂದು ಉಜಿರೆಯಿಂದ ಧರ್ಮಸ್ಥಳ ಬಸ್ ನಿಲ್ದಾಣಕ್ಕೆ ರಾತ್ರಿ ಸುಮಾರು 9 ಗಂಟೆಗೆ ಅವಳನ್ನು ಡ್ರಾಪ್ ಮಾಡಿ ಹಿಂದಿರುಗುವಾಗ ಅಪರಿಚಿತ ಯುವಕರ ತಂಡವೊಂದು ‘ನಿನಗೆ ಹಿಂದೂ ಯುವತಿಯರೇ ಬೇಕಾ’ ಎಂದು ಬೆದರಿಕೆ ಹಾಕಿ ಹಲ್ಲೆ ನಡೆಸಿದ್ದಾರೆ.

ಆಟೋ ಚಾಲಕನನ್ನು ಉಜಿರೆ ಗ್ರಾಮದ ಅತ್ತಾಜೆ ನಿವಾಸಿ ಮೊಹಮ್ಮದ್ ಆಶಿಕ್ ಎಂದು ಗುರುತಿಸಲಾಗಿದೆ. ಚಾಲಕ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳ ಪತ್ತೆಗೆ ಧರ್ಮಸ್ಥಳ ಸಬ್ ಇನ್ಸ್ ಪೆಕ್ಟರ್ ಅನಿಲ್ ಕುಮಾರ್ ಮತ್ತು ತಂಡ ಧರ್ಮಸ್ಥಳ ಸುತ್ತಮುತ್ತಲಿನ ಸಿಸಿಕ್ಯಾಮರಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

 

error: Content is protected !!