ಬೆಳ್ತಂಗಡಿ: ವಿದ್ಯೆಯಿಂದ ಉತ್ತಮ ಹಾಗೂ ಸಧೃಢ ಸಮಾಜ ನಿರ್ಮಾಣ ಸಾಧ್ಯ. ವಿದ್ಯೆಗಿಂತ ದೊಡ್ಡ ಆಸ್ತಿ ಇನ್ನೊಂದಿಲ್ಲ, ಆದ್ದರಿಂದ ವಿದ್ಯೆಗೆ ಪ್ರೋತ್ಸಾಹ ನೀಡಬೇಕು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹೇಳಿದರು..
ಅವರು ಆ. 06 ರಂದು ಗುರುವಾಯನಕೆರೆ ಬಂಟರ ಭವನದಲ್ಲಿ ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ ಇದರ ಆಶ್ರಯದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಮಂಗಳೂರು, ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಬಂಟರ ಸಂಘ ಬೆಂಗಳೂರು ಇವುಗಳ ಸಹಭಾಗಿತ್ವದಲ್ಲಿ ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ, ಮತ್ತು ಅರ್ಹ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಬೆಳ್ತಂಗಡಿ ಬಂಟರ ಸಂಘ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಇಂತಹ ಮಾದರಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದರು.
ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷ ಜಯರಾಮ್ ಶೆಟ್ಟಿ ಮುಂಡಾಡಿ ಗುತ್ತು ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮಕ್ಕೆ ನಿಕಟಪೂರ್ವ ಲಯನ್ಸ್ ಜಿಲ್ಲಾ ರಾಜಪಾಲರಾದ ಸಂಜಿತ್ ಶೆಟ್ಟಿ ಚಾಲನೆ ನೀಡಿದರು. ಮಂಗಳೂರು ಮಾತೃ ಸಂಘ ಸಂಚಾಲಕ ಜಯರಾಮ್ ಭಂಡಾರಿ . ಮಂಗಳೂರು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ನಿರ್ದೇಶಕ ಜಯಂತ್ ಶೆಟ್ಟಿ ಕುಂಟಿನಿ . ಉಜಿರೆ ಎಸ್‌ಡಿಎಂ ಕಾಲೇಜ್ ಪ್ರಾಂಶುಪಾಲ ಡಾಕ್ಟರ್ ಬಿ.ಎ ಕುಮಾರ ಹೆಗ್ಡೆ, ಸಂಚಾಲಕರಾದ ವಿಠಲ್ ಶೆಟ್ಟಿ. ಕಾರ್ಯದರ್ಶಿ ಸಂಜೀವ ಶೆಟ್ಟಿ ಕುಂಟಿನಿ ಕೋಶಾಧಿಕಾರಿ ಕೆಎನ್ ಆನಂದ ಶೆಟ್ಟಿ. ಜೊತೆ ಕಾರ್ಯದರ್ಶಿ ಸುರೇಶ್ ಶೆಟ್ಟಿ ಲಾಯಿಲ. ಬಂಟರ ಯುವ ವಿಭಾಗದ ಅಧ್ಯಕ್ಷರಾದ ಸುಜಯ್ ಶೆಟ್ಟಿ. ಮಹಿಳಾ ವಿಭಾಗದ ಅಧ್ಯಕ್ಷರಾದ ಶೋಭಾ ವಿ ಶೆಟ್ಟಿ ಉಪಸಿತರಿದ್ದರು.
ಸಂಘದ ಉಪಾಧ್ಯಕ್ಷ ವಿಠ್ಠಲ್ ಶೆಟ್ಟಿ ಸಾಗತಿಸಿ, ವಸಂತ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.