ಬೆಂಗಳೂರು: ಬ್ಯಾಂಕಾಕ್ ಪ್ರವಾಸಕ್ಕೆ ತೆರಳಿದ್ದ ವೇಳೆ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ತಂದೆ ಬಿ.ಕೆ ಶಿವರಾಮ್ ನಿವಾಸದಲ್ಲಿ ನಡೆಯುತ್ತಿದೆ.
ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರೂ ಬೆಂಗಳೂರಿಗೆ ತೆರಳಿ ಅಂತಿಮ ದರ್ಶನ ಪಡೆದು ಸ್ಪಂದನಾ ಸಹೋದರ ರಕ್ಷಿತ್ ಶಿವರಾಂ ಸೇರಿದಂತೆ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಇಂದು ಹರಿಶ್ಚಂದ್ರ ಘಾಟ್‌ನಲ್ಲಿ ಅಂತ್ಯಸಂಸ್ಕಾರ ನೆರವೇರಲಿದ್ದು, ಗಣ್ಯರು, ಸಾರ್ವಜನಿಕರು ಸ್ಪಂದನ ಅವರ ಅಂತಿಮ ದರ್ಶನ ಪಡೆಯುತ್ತಿದ್ದಾರೆ.