ಮಾಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಸೇರಿದಂತೆ ಓರ್ವ ಸದಸ್ಯ ಕಾಂಗ್ರೆಸ್ ಸೇರ್ಪಡೆ: ಪಕ್ಷದ ಬಾವುಟ ನೀಡಿ ಬರಮಾಡಿಕೊಂಡ ಮಾಜಿ ಶಾಸಕ ವಸಂತ ಬಂಗೇರ:

 

 

 

ಬೆಳ್ತಂಗಡಿ : ಮಾಲಾಡಿ ಗ್ರಾಮ‌ ಪಂಚಾಯತ್ ಹಾಲಿ ಅಧ್ಯಕ್ಷ ಸೇರಿದಂತೆ ಸದಸ್ಯರೊಬ್ಬರು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ.ಮಾಲಾಡಿ ಗ್ರಾಮ ಪಂಚಾಯತ್ ನಲ್ಲಿ ಬಿಜೆಪಿ ಬೆಂಬಲಿತ 11 ಹಾಗೂ ಕಾಂಗ್ರೆಸ್ ಬೆಂಬಲಿತ 7 ಸದಸ್ಯರು ಸೇರಿ ಒಟ್ಟು 18 ಸದಸ್ಯರುಗಳಿದ್ದು ಬಿಜೆಪಿ ಬೆಂಬಲಿತ ಸದಸ್ಯರೊಬ್ಬರು ಅಧ್ಯಕ್ಷ ಸ್ಥಾನಕ್ಕೆ ನಾಮ ಪತ್ರ ಸಲ್ಲಿಸಿದ್ದರು. ಈ ವೇಳೆ ಕಳೆದ ಪಂಚಾಯತ್ ಚುನಾವಣೆಯಲ್ಲಿ ಪಕ್ಷೇತರನಾಗಿ ಜಯಗಳಿಸಿ ನಂತರ ಬಿಜೆಪಿಗೆ ಸೇರ್ಪಡೆಗೊಂಡಿದ್ದ ಪುನೀತ್ ಕೂಡ ನಾಮ ಪತ್ರ ಸಲ್ಲಿಸಿದ್ದರು.ಈ ವೇಳೆ 3 ಮಂದಿ ಬಿಜೆಪಿ ಬೆಂಬಲಿತ ಸದಸ್ಯರ ಹಾಗೂ 7 ಮಂದಿ ಕಾಂಗ್ರೆಸ್ ಬೆಂಬಲಿತ ಸದಸ್ಯರ ಸಹಕಾರದಲ್ಲಿ ಪುನೀತ್ ಅವರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಇಂದು ಹಾಲಿ ಅಧ್ಯಕ್ಷ ಪುನೀತ್ ಸೇರಿದಂತೆ ಸದಸ್ಯ ವಸಂತ ಪೂಜಾರಿ ಅವರನ್ನು ಆಗಸ್ಟ್ 10 ರಂದು ಬೆಳ್ತಂಗಡಿ ಗುರುನಾರಾಯಣ ಸಭಾ ಭವನದಲ್ಲಿ ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಕಾಂಗ್ರೆಸ್ ಪಕ್ಷದ ಬಾವುಟ ನೀಡುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡರು.ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಪುನೀತ್ ಬಿಜೆಪಿ ಪಕ್ಷದ ಮೇಲಿನ ಅಸಾಮಾಧಾನದಿಂದ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದೇವೆ. ಪಂಚಾಯತ್ ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ರಹಿತವಾಗಿ ಕಾರ್ಯನಿರ್ವಹಿಸುವುದಾಗಿ ತಿಳಿಸಿದರು.

 

ಕಾಂಗ್ರೆಸ್ ಪಕ್ಷ ಸೇರ್ಪಡೆ ವೇಳೆ ಬ್ಲಾಕ್ ಕಾಂಗ್ರೆಸ್ ಕಾಂಗ್ರೆಸ್ ನಗರ ಅಧ್ಯಕ್ಷ ಸತೀಶ್ ಕಾಶಿಪಟ್ನ , ಗ್ರಾಮೀಣ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ನಾಗೇಶ್ ಗೌಡ, ಮನೋಹರ್ ಕುಮಾರ್, ಶೇಖರ್ ಕುಕ್ಕೇಡಿ ,ಜಯ ವಿಕ್ರಂ, ಬೇಬಿ ಸುವರ್ಣ, ಉಮೇಶ್ ಮಾಲಾಡಿ, ಪದ್ಮನಾಭ ಸಾಲ್ಯಾನ್,ಪ್ರವೀಣ್ ಫರ್ನಾಂಡೀಸ್,ಪ್ರೇಮ ವಸಂತ್ ,ಹರೀಶ್ ಪೂಜಾರಿ, ಉಮೇಶ್ ಪೂಜಾರಿ,ರಾಕೇಶ್ ಕುಮಾರ್ ಮತ್ತಿತರರು ಜೊತೆಯಲ್ಲಿದ್ದರು.

error: Content is protected !!