ವೇಣೂರು ಅರಣ್ಯ ವ್ಯಾಪ್ತಿಯಲ್ಲಿ  125 ಕೆ.ಜಿ ರಕ್ತ ಚಂದನ ವಶ:  ಇಬ್ಬರ ಬಂಧನ ಓರ್ವ ಪರಾರಿ:

 

 

 

ಬೆಳ್ತಂಗಡಿ: ವೇಣೂರು ಸಮೀಪ ಕರಿಮಣೇಲು ಎಂಬಲ್ಲಿ ಬೆಂಗಳೂರು ಸಿಐಡಿ ಪೊಲೀಸ್ ಅರಣ್ಯ ಘಟಕದ(FMS) ತಂಡವು 125 ಕೆ.ಜಿ. ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ರಕ್ತ ಚಂದನವನ್ನು ವಶಕ್ಕೆ ಪಡೆದುಕೊಂಡು ವೇಣೂರು ಅರಣ್ಯ ಇಲಾಖೆಗೆ ಹಸ್ತಾಂತರ ಮಾಡಿದ್ದಾರೆ.

ರಕ್ತ ಚಂದನ ಸಾಗಾಟ ಮಾಡಿದ ಆರೋಪಿತರಾದ ಬಂಟ್ವಾಳ ತಾಲೂಕಿನ ಮಾವಿನಕಟ್ಟೆ ನಿವಾಸಿ ಖಾಲಿದ್ ಹಾಗೂ ಗುರುವಾಯನಕೆರೆ ನಿವಾಸಿ ದೀಕ್ಷಿತ್ ಇಬ್ಬರನ್ನು ಬಂಧಿಸಲಾಗಿದೆ. ಮತ್ತೋರ್ವ ಆರೋಪಿ ಸಂತೋಷ್ ತಲೆಮರೆಸಿಕೊಂಡಿದ್ದಾನೆ.

ಬೆಳ್ತಂಗಡಿ ತಾಲೂಕಿನ ವೇಣೂರು ವ್ಯಾಪ್ತಿಯ ಕರಿಮಣೇಲು ಎಂಬಲ್ಲಿಂದ ಅಕ್ರಮವಾಗಿ ರಕ್ತಚಂದನ ಸಾಗಾಟ ನಡೆಸಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಬೆಂಗಳೂರು ಸಿಐಡಿ ಪೊಲೀಸ್ ಅರಣ್ಯ ಘಟಕದ(FMS) ಸಬ್ ಇನ್ಸ್ಪೆಕ್ಟರ್ ಜಾನಕಿ ನೇತೃತ್ವದ ತಂಡದ ಸಿಬ್ಬಂದಿಗಳು ಆರೋಪಿಗಳು ಸಹಿತ 125 ಕೆ.ಜಿ. ರಕ್ತಚಂದನ ಸಾಗಾಟಕ್ಕೆ ಬಳಸಿದ ವಾಹನ ವಶಕ್ಕೆ‌ಪಡೆದಿದ್ದಾರೆ. ಹೆಚ್ಚಿನ ತನಿಖೆಗಾಗಿ ಪ್ರಕರಣ ವೇಣೂರು ಅರಣ್ಯ ಇಲಾಖೆಗೆ ಹಸ್ತಾಂತರ ಮಾಡಿದ್ದಾರೆ.

error: Content is protected !!