ಸೌಜನ್ಯ ಪ್ರಕರಣ: ಆ.27ರಂದು ಬೆಳ್ತಂಗಡಿಯಲ್ಲಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ: ಸಂಸದ ನಳಿನ್ ಕುಮಾರ್ ಕಟೀಲ್

ಮಂಗಳೂರು: ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ನೈಜ ಆರೋಪಿಯ ಪತ್ತೆಗಾಗಿ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆಯುತ್ತಿದ್ದು ವಿವಿಧ ಸಂಘಟನೆಗಳೂ ಕೂಡ ನ್ಯಾಯಪರ ಧ್ವನಿ ಎತ್ತಿದೆ. ಇದೀಗ ಬಿಜೆಪಿ ಕೂಡ ಸೌಜನ್ಯಾಳ ನ್ಯಾಯಕ್ಕಾಗಿ ಆಗ್ರಹಿಸಿದ್ದು ಈ ಕುರಿತು ದಕ್ಷಿಣ ಕನ್ನಡ ಜಿಲ್ಲಾ ಶಾಸಕರು ಹಾಗೂ ಸಂಸದರು ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ.

ಪ್ರಕರಣ ಕುರಿತು ಮಾತನಾಡಿದ ಸಂಸದ ನಳಿನ್ ಕುಮಾರ್ ಕಟೀಲ್, ಇಡೀ ಪ್ರಕರಣದ ಮರು ತನಿಖೆಗೆ ಬಿಜೆಪಿ ಆಗ್ರಹಿಸುತ್ತದೆ, ಪ್ರಕರಣದ ಹಿಂದೆ ಪ್ರಭಾವಿಗಳು ಯಾರೇ ಇದ್ರು ಮರುತನಿಖೆಯಾಗಬೇಕು. ಕುಟುಂಬದ ಆಗ್ರಹಗಳ ತನಿಖೆ ಆಗಬೇಕು. ಹಂತಕರ ಪತ್ತೆ ಮೂಲಕ ಕುಟುಂಬಕ್ಕೆ ನ್ಯಾಯ ಸಿಗಬೇಕು. ಇದರಲ್ಲಿ ಯಾರನ್ನೂ ಟಾರ್ಗೆಟ್ ಮಾಡುವ ವಿಷಯ ಇಲ್ಲ. ಸೌಜನ್ಯ ಕುಟುಂಬಕ್ಕೆ ನ್ಯಾಯ ಸಿಗಬೇಕು ಅನ್ನೋದು ನಮ್ಮ ಉದ್ದೇಶ ಎಂದಿದ್ದಾರೆ.

ಪ್ರಕರಣದ ಮರು ತನಿಖೆಗೆ ಒತ್ತಾಯಿಸಿ ಆ.27ರಂದು ದ.ಕ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಕಾರ್ಯಕರ್ತರು ಸೇರಿ ಬೆಳ್ತಂಗಡಿ ತಾಲೂಕು ಕಚೇರಿ ಮುಂಭಾಗದಲ್ಲಿ ಬೃಹತ್ ಹೋರಾಟ ನಡೆಯಲಿದೆ. ಪ್ರತಿಭಟನೆಯಲ್ಲಿ ಎರಡೂ ಜಿಲ್ಲೆಗಳ ಶಾಸಕರು, ನಾಯಕರು ಭಾಗಿಯಾಗಲಿದ್ದಾರೆ. ಮರುದಿನ ಶಾಸಕರ ನಿಯೋಗ ಸಿಎಂಗೆ ಹಾಗೂ ರಾಜ್ಯಪಾಲರಿಗೆ ಮನವಿ ನೀಡಿ ಮರುತನಿಖೆಗೆ ಒತ್ತಾಯಿಸಲಿದ್ದೇವೆ. ಹಂತಕರ ಪತ್ತೆ ಮೂಲಕ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದಿದ್ದಾರೆ.

ಪತಿಕಾಗೋಷ್ಠಿಯಲ್ಲಿ ದ.ಕ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರು ಹಾಗೂ ಪ್ರಮುಖರು ಭಾಗಿಯಾಗಿದ್ದರು.

error: Content is protected !!