ಬೆಳ್ತಂಗಡಿ: ಲೋ ಬಿಪಿಯಿಂದ ಹೃದಯಾಘಾತ..! ನರ್ಸಿಂಗ್ ವಿದ್ಯಾರ್ಥಿನಿ ಸಾವು..!

ಬೆಳ್ತಂಗಡಿ: ಲೋ ಬಿಪಿಯಿಂದ ಹೃದಯಾಘಾತಗಾಗಿ ಯುವತಿಯೋರ್ವಳು ಮೃತಪಟ್ಟ ಘಟನೆ ಆ. 13 ರಂದು ನಡೆದಿದೆ.

ನೆರಿಯ ಗ್ರಾಮದ ಗಂಡಿಬಾಗಿಲು ಜಾತಿಮಾರು ನಿವಾಸಿ ರಾಜು ದೇವಾಡಿಗ ಮತ್ತು ಸರೋಜ ದಂಪತಿಗಳ ಮಗಳು ಸುಮಾ (19) ನರ್ಸಿಂಗ್ ವಿದ್ಯಾಭ್ಯಾಸ ಮಾಡುತಿದ್ದರು. ಆಗಸ್ಟ್ 9 ರಂದು ಅನಾರೋಗ್ಯದ ಕಾರಣದಿಂದ ಸ್ಥಳೀಯ ಆಸ್ಪತ್ರೆಗೆ ತೆರಳಿ ಮಾತ್ರೆಗಳನ್ನು ಪಡೆದು ಮನೆಗೆ ತೆರಳಿದ್ದರು. ಆಗಸ್ಟ್11 ರಂದು ಮತ್ತೆ ಆರೋಗ್ಯದ ಸಮಸ್ಯೆ ಹೆಚ್ಚಾದ ಕಾರಣ ಮಂಗಳೂರು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಬಳಿಕ ಗುಣಮುಖವಾಗಿರುವ ಸುಮಾ ತನ್ನ ಅಕ್ಕನ ಮನೆ ಬಳ್ಳಮಂಜಕ್ಕೆ ತೆರಳಿದ್ದರು. ಆದರೆ ಆಗಸ್ಟ್ 13 ರಂದು ಸಂಜೆ ಮತ್ತೆ ಅಸ್ವಸ್ಥಗೊಂಡಿದ್ದು ಮಂಗಳೂರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಲೋ ಬಿಪಿಯಿಂದ ಹೃದಯಾಘಾತವಾಗಿ ಸಾವನ್ನಪ್ಪಿದ್ದಾಳೆ ಎನ್ನಲಾಗಿದೆ.

error: Content is protected !!