ಲಾಯಿಲ : ಪಡ್ಲಾಡಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ:ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು

 

 

ಬೆಳ್ತಂಗಡಿ: ಎಪ್ಪತ್ತೇಳನೇ ಸ್ವಾತಂತ್ರ್ಯ ದಿನಾಚರಣೆಯನ್ನು ಲಾಯಿಲ ಗ್ರಾಮದ ಒಂದನೇ ವಾರ್ಡಿನಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು.‌ಹಂದೆವೂರು ಅಂಗನವಾಡಿ ಕೇಂದ್ರದಲ್ಲಿ ಹಿರಿಯ ಕೃಷಿಕರಾದ ಮೌರೀಸ್ ಪಿಂಟೋ ಅವರು ಧ್ವಜಾರೋಹಣಗೈದರು.‌ಪಡ್ಲಾಡಿ ಅಂಗನವಾಡಿ ಕೇಂದ್ರದಲ್ಲಿ ಹಿರಿಯರಾದ ಅಚುತ ಗೌಡ ಧ್ವಜಾರೋಹಣಗೈದರು.‌ಪಡ್ಲಾಡಿ ಶಾಲಾ ಮೈದಾನದಲ್ಲಿ‌ ನಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ನಿನ್ನಿಕಲ್ಲು ನಿವಾಸಿ ಆನಂದ ಪೂಜಾರಿ ಧ್ವಜಾರೋಹಣಗೈದು ಶುಭ ಹಾರೈಸಿದರು.‌

 

 

ಶಾಲಾ ಮಕ್ಕಳಿಗೆ ಹಾಗೂ ಪೋಷಕರಿಗೆ ಹಾಡು ನೃತ್ಯ ಭಾಷಣಗಳ ಮುಖಾಂತರ ದೇಶಭಕ್ತಿಯನ್ನು ಬಿಂಬಿಸುವ ಬೆಳೆಸುವ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ನಡೆದ ವಿವಿಧ ಸ್ಪರ್ಧೆಗಳಿಗೆ ಮುಖ್ಯ ಅತಿಥಿಗಳು ಬಹುಮಾನವನ್ನು ನೀಡಿ ಪ್ರೋತ್ಸಾಹಿಸಿದರು.
ಸಭಾ ಕಾರ್ಯಕ್ರಮದಲ್ಲಿ ಲಾಯಿಲ ಗ್ರಾಮ ಪಂಚಾಯತ್ ಸದಸ್ಯ ಪ್ರಸಾದ್ ಶೆಟ್ಟಿ ಎಣಿಂಜೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಸ್ವಾತಂತ್ರ್ಯೋತ್ಸವದ ಮಹತ್ವದ ಬಗ್ಗೆ ವಿವರಿಸಿದರು.

 

 

ಈ ಸಂದರ್ಭದಲ್ಲಿ ಗ್ರಾ.ಪಂ ಸದಸ್ಯೆ ಜಯಂತಿ ಅನ್ನಡ್ಕ, ಎಸ್ ಡಿ ಎಂ ಸಿ ಅಧ್ಯಕ್ಷ ಸೂರಪ್ಪ ಪಡ್ಲಾಡಿ, ಉಪಾಧ್ಯಕ್ಷ ದಿವಾಕರ್ ಕುರುವ, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಜಯಂತಿ ಅರಾಧ್ಯ, ಸ್ವ ಸಹಾಯ ಸಂಘಗಳ ಪ್ರೇರಕಿ ಗೀತಾ ಸಪ್ತಗಿರಿ, ಉತ್ಸಾಹಿ ಯುವಕ ಮಂಡಲ ಅಧ್ಯಕ್ಷ ಹರ್ಷಿತ್ ಲಾಯಿಲ ಬೈಲು, ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಪಡ್ಲಾಡಿ ಅಧ್ಯಕ್ಷ ಹರ್ಷಿತ್ ನಿನ್ನಿಕಲ್ಲು, ಅಂಬೇಡ್ಕರ್ ಉಸ್ತುವಾರಿ ಸಮಿತಿ ಅಧ್ಯಕ್ಷ ಹರೀಶ್ , ಎಲ್.(ನೆನಪು) ಅಂಗನವಾಡಿ ಟೀಚರ್ ದೇಜಮ್ಮ ಸೇರಿದಂತೆ
ಮಕ್ಕಳು, ಪೋಷಕರು ಶಿಕ್ಷಕರು ಉಪಸ್ಥಿತರಿದ್ದರು.

 

 

 

ಶಿಕ್ಷಕ ಯೋಗೀಶ್ ಕಾರ್ಯಕ್ರಮ ನಿರೂಪಿಸಿ ಮುಖ್ಯೋಪಾಧ್ಯಾಯಿನಿ ರಾಜೇಶ್ವರಿ ಸ್ವಾಗತಿಸಿ ಧನ್ಯವಾದವಿತ್ತರು.

 

error: Content is protected !!