ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆ 23 ಬುಧವಾರ ಬೆಳ್ತಂಗಡಿಗೆ ಭೇಟಿ ನೀಡಲಿದ್ದಾರೆ.
ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆಗಸ್ಟ್ 23 ರಂದು ಬೆಳ್ತಂಗಡಿ ತಾಲೂಕಿಗೆ ಆಗಮಿಸಲಿದ್ದು ಮಧ್ಯಾಹ್ನ 3 ಗಂಟೆಯಿಂದ 4.30 ರವರೆಗೆ ತಾಲೂಕು ಕಛೇರಿಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಮತ್ತು ಕಂದಾಯ ಸಿಬ್ಬಂದಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ.ನಂತರ 4.30 ರಿಂದ 5.30 ರವರೆಗೆ ಸಾರ್ವಜನಿಕರ ಅಹವಾಲು ಸ್ವೀಕಾರ ಮಾಡಲಿದ್ದಾರೆ.