ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ್ಟ್ ನಿಂದ ನೋಟೀಸ್ : ಅಧೀನ ನ್ಯಾಯಾಲಯದ ಪ್ರತಿಬಂಧಕಾದೇಶ ಉಲ್ಲಂಘಿಸದಂತೆ ಸೂಚನೆ

ಬೆಂಗಳೂರು: ರಾಜ್ಯಾದ್ಯಂತ ಸೌಜನ್ಯ ಪ್ರಕರಣದ ಪ್ರತಿಭಟನೆ ಹೆಚ್ಚಾಗುತ್ತಿದ್ದಂತೆ ಇತ್ತ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಧರ್ಮಸ್ಥಳದ ವಿಚಾರವಾಗಿ ಹೈಕೋರ್ಟ್ ಆದೇಶವೊಂದನ್ನು ಕಳುಹಿಸಿದೆ.

ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡುವಾಗ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಮತ್ತು ಕುಟುಂಬ ಸದಸ್ಯರ ವಿರುದ್ಧ ಹೇಳಿಕೆ ನೀಡದಂತೆ ಅಧೀನ ನ್ಯಾಯಾಲಯ ನೀಡಿರುವ ಪ್ರತಿಬಂಧಕಾದೇಶ ಉಲ್ಲಂಘನೆ ಮಾಡದಂತೆ ನೊಟೀಸ್ ಜಾರಿಗೊಳಿಸಿದ್ದು ಪ್ರತಿಬಂಧಕಾದೇಶ ಉಲ್ಲಂಘನೆ ಆಗದಂತೆ ನೋಡಿಕೊಳ್ಳಲು ಡಿ.ಜಿ. ಮತ್ತು ಐ.ಜಿ., ಸರಕಾರದ ಮುಖ್ಯ ಕಾರ್ಯದರ್ಶಿ, ದಕ್ಷಿಣ ಕನ್ನಡ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಸೇರಿದಂತೆ ಪೋಲಿಸ್ ಉನ್ನತ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ಶೀನಪ್ಪ ಮತ್ತು ನಂದೀಶ್ ಕುಮಾರ್ ಜೈನ್ ಸಲ್ಲಿಸಿರುವ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯ ಪೀಠ ಈ ಸೂಚನೆ ನೀಡಿದೆ.

error: Content is protected !!