ಸೌಜನ್ಯ ಪ್ರಕರಣವನ್ನು ಮರುತನಿಖೆಗೆ ಒಳಪಡಿಸುವಂತೆ ಸರಕಾರಕ್ಕೆ ಒತ್ತಾಯ: ಮುಖ್ಯಮಂತ್ರಿಯನ್ನು ಭೇಟಿಯಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಶಾಸಕರ ನಿಯೋಗ

ಬೆಂಗಳೂರು: ಸೌಜನ್ಯ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸುವಂತೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಶಾಸಕರ ನಿಯೋಗ ಸೆ.04ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ.

ಶಾಸಕರ ನಿಯೋಗದ ಮನವಿಗೆ ಸ್ಪಂದಿಸಿದ ಸಿಎಂ ಸಿದ್ದರಾಮಯ್ಯ ಅವರು ಸೌಜನ್ಯ ಪ್ರಕರಣವನ್ನು ಮರುತನಿಖೆಗೆ ಒಳಪಡಿಸಲು ರಾಜ್ಯ ಸರಕಾರಕ್ಕೆ ಕಾನೂನಿನಲ್ಲಿ ಅವಕಾಶವಿರುವುದಿಲ್ಲ. ಈ ವಿಷಯವನ್ನು ಸೌಜನ್ಯ ಪೋಷಕರಿಗೆ ನಾನು ತಿಳಿಸಿದ್ದೇನೆ. ಈಗಾಗಲೇ ಕಾನೂನು ಸಲಹೆಯನ್ನು ನಾನು ಪಡೆದಿರುವುದರಿಂದ ಸೌಜನ್ಯಳ ಪೋಷಕರು ಮೇಲ್ಮನವಿ ಸಲ್ಲಿಸಬಹುದು ಅಥವಾ ಸಿಬಿಐ ಮೇಲ್ಮನವಿ ಸಲ್ಲಿಸಲು ಅವಕಾಶವಿರುತ್ತದೆ. ನಿಮ್ಮ ಮನವಿಯಂತೆ ಇನ್ನೊಮ್ಮೆ ನಾನು ಕಾನೂನು ಸಲಹೆ ಪಡೆಯುವುದಾಗಿ ಭರವಸೆ ನೀಡಿದ್ದಾರೆ.

error: Content is protected !!