ಬೆಳ್ತಂಗಡಿ: ಹೃದಯಾಘಾತದಿಂದ ಯುವಕ ಸಾವು..!


ಬೆಳ್ತಂಗಡಿ :
ಹೃದಯಾಘಾತದಿಂದ ಯುವಕ ಸಾವನ್ನಪ್ಪಿದ ಘಟನೆ ಸೆ.08ರಂದು ನಾವೂರು ಗ್ರಾಮದಲ್ಲಿ ನಡೆದಿದೆ.

ಕಿರ್ನಡ್ಕ ನಿವಾಸಿ ಕಿಟ್ಟಣ್ಣ ನಾಯ್ಕ ಮತ್ತು ವೇದಾವತಿ ದಂಪತಿಗಳ ಪುತ್ರ ಪ್ರದೀಪ್ (25)ಗೆ ನಿನ್ನೆ ರಾತ್ರಿ ಹೃದಯಾಘಾತವಾಗಿದ್ದು ತಕ್ಷಣ ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಪ್ರದೀಪ್ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.
ಮೃತರು ಸಹೋದರಿ ಪದ್ಮಾವತಿ, ಸಹೋದರ ನಿತೇಶ್ ಹಾಗೂ ಬಂಧುಬಳಗವನ್ನು ಅಗಲಿದ್ದಾರೆ.

error: Content is protected !!