ಬೆಳ್ತಂಗಡಿ ತಾಲೂಕು ಪಂಚಾಯತ್ ನೂತನ ಕಟ್ಟಡ ಉದ್ಘಾಟನೆ : ಶಾಸಕ ಹರೀಶ್ ಪೂಂಜರನ್ನು ಶ್ಲಾಘಿಸಿದ ಸಚಿವ ದಿನೇಶ್ ಗುಂಡೂರಾವ್

ಬೆಳ್ತಂಗಡಿ: ಗ್ರಾಮಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ , ಮಂಗಳೂರು ಇವುಗಳ ಸಹಯೋಗದಲ್ಲಿ ಬೆಳ್ತಂಗಡಿ ತಾಲೂಕು ಪಂಚಾಯತ್ ನೂತನ ಕಟ್ಟಡವನ್ನು ಸೆ.11ರಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ರವರು ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು ಮೂಲಭೂತ ಸೌಕರ್ಯದೊಂದಿಗೆ ನೂತನ ಕಟ್ಟಡ ಕೆಲಸ ಮಾಡಲು ಪೂರಕವಾಗಿದೆ. ಕಟ್ಟಡದೊಳಗಿನ ವಾತಾವರಣ ಬಹಳಷ್ಟು ಚೆನ್ನಾಗಿದೆ. ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆಗಳು ಎಂದರು.

ಚುನಾವಣೆ ಸರಿಯಾಗಿ ನಡೆಯದೆ ಸ್ಥಳೀಯ ಸಂಸ್ಥೆಗಳು ಅವ್ಯವಸ್ಥಿತವಾಗಿದೆ. ಈ ಬಗ್ಗೆ  ಆದಷ್ಟು ಬೇಗ ಚರ್ಚೆ ನಡೆಸಿ ತಾಲೂಕು ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆ ನಡೆಸಲು ನಿರ್ಧಾರವನ್ನು ಕೈಗೊಳ್ಳುತ್ತೇವೆ ಎಂದರು.

ಕಾಂಗ್ರೆಸ್ ಸರಕಾರ 100 ದಿನ ಪೂರೈಸಿದ್ದು, ನಾವು ನೀಡಿದ ಆಶ್ವಾಸನೆಗಳನ್ನು ಈಡೇರಿಸಿದ್ದೇವೆ. 5 ಗ್ಯಾರಂಟಿಯಲ್ಲಿ 4 ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದ್ದೇವೆ, ನುಡಿದಂತೆ ನಡೆದಿದ್ದೇವೆ ಎಂದರು.

ಶಾಸಕ ಹರೀಶ್ ಪೂಂಜರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನ ಪರಿಷತ್ ಮಂಜುನಾಥ ಭಂಡಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಆನಂದ ಕೆ., ಪುತ್ತೂರು ಸಹಾಯಕ ವಿಭಾಗ ಅಧಿಕಾರಿ ಗೀರಿಶ್ ನಂದನ್, ತಹಶೀಲ್ದಾರ್ ಸುರೇಶ್ ಕುಮಾರ್ ಟಿ., ಕಾರ್ಯನಿರ್ವಾಹಕ ಅಭಿಯಂತರರು ಪಂಚಾಯತ್ ರಾಜ್ ಇಂಜಿನಿಯರ್ ವಿಭಾಗ, ಮಂಗಳೂರಿನ ಆರ್.ವೇಣುಗೋಪಾಲ್, ಬೆಳ್ತಂಗಡಿ ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯ ನಿತೀನ್, ವೇದಿಕೆಯಲ್ಲಿ ಉಪಸ್ಥಿತರಿದ್ದರು.

error: Content is protected !!