ಮುಂಡಾಜೆ, ₹ 5 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಪ್ರಕರಣ: ಪೊಲೀಸ್ ತನಿಖೆ ಚುರುಕುಗೊಂಡ ಬೆನ್ನಲ್ಲೇ ಅಂಗಳದಲ್ಲಿ ಪತ್ತೆ:..!

 

ಬೆಳ್ತಂಗಡಿ: ಮುಂಡಾಜೆಯ ಮನೆಯೊಂದರಲ್ಲಿ ನಾಪತ್ತೆಯಾದ ಚಿನ್ನಾಭರಣ ಅಂಗಳದಲ್ಲಿ ಇಂದು ಸೆ 15 ರಂದು   ಪತ್ತೆಯಾಗಿದೆ. ಮುಂಡಾಜೆ ಗ್ರಾಮದ ಕಡಂಬಳ್ಳಿಯ ಪ್ರಮೋದ್  ವಿ.ಭಿಡೆ ಜು 05 ರಂದು  ತಮ್ಮ ಮನೆಯ ದುರಸ್ತಿ ಕೆಲಸವನ್ನು  ಕಾರ್ಮಿಕರ ಮೂಲಕ  ಆರಂಭಿಸಿದ್ದು ಇದಕ್ಕೆ ಮೊದಲು ಮನೆಯಲ್ಲಿದ್ದ ಚಿನ್ನಾಭರಣಗಳನ್ನು ಅವರ ಪತ್ನಿ ಮನೆಯ ನೆಲಮಾಳಿಗೆಯಲ್ಲಿ ಕೋಣೆಗೆ ಬೀಗ ಹಾಕದೆ ಇರಿಸಿದ್ದರು.10ರಿಂದ 13 ಮಂದಿ ಕಾರ್ಮಿಕರು ಜು.19ರಂದು ಕಾಮಗಾರಿ ಮುಗಿಸಿ ತೆರಳಿದ್ದರು.
ಬಳಿಕ ಸೆ.12ರಂದು ಕಾರ್ಯಕ್ರಮಕ್ಕೆ ತೆರಳುವ ವೇಳೆ ಆಭರಣ ಧರಿಸಲು ಆಭರಣ ಇರಿಸಲಾಗಿದ್ದ ಸ್ಥಳಕ್ಕೆ ಹೋಗಿ ನೋಡಿದಾಗ, ಸುಮಾರು 5 ಲಕ್ಷ ರೂ. ಮೌಲ್ಯದ 122 ಗ್ರಾಂ ಚಿನ್ನಾಭರಣ ಕಳುವಾಗಿರುವ ಘಟನೆ ಬೆಳಕಿಗೆ ಬಂದಿತ್ತು.
ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪೊಲೀಸರು ಪ್ರಕರಣದ ಕುರಿತು ಕೆಲವರನ್ನು ಠಾಣೆಗೆ ಕರೆಯಿಸಿ ತನಿಖೆ ನಡೆಸಿದ್ದರು.ಪೊಲೀಸ್
ತನಿಖೆ ಚುರುಕುಗೊಳ್ಳುತ್ತಿದ್ದಂತೆ ನಾಪತ್ತೆಯಾಗಿದ್ದ ಚಿನ್ನಾಭರಣ ಸೆ 15 ಶುಕ್ರವಾರ  ಮನೆ ಅಂಗಳದಲ್ಲಿ ಪತ್ತೆಯಾಗಿದೆ. ಬೆಳ್ತಂಗಡಿ ವೃತ್ತ ನಿರೀಕ್ಷಕ ನಾಗೇಶ್ ಕದ್ರಿ ಹಾಗೂ ತಂಡದವರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಕಳವಾದ ಚಿನ್ನಾಭರಣ ತನಿಖೆ ಚುರುಕುಗೊಳ್ಳುತ್ತಿದ್ದಂತೆ ಮನೆಯಂಗಳದಲ್ಲಿ ಕಂಡುಬಂದಿರುವುದು ಹಲವು ಅನುಮಾನಗಳನ್ನು ಸೃಷ್ಟಿಸಿದೆ.

error: Content is protected !!