ಸಂತ ತೆರೇಸಾ ಪ್ರೌಢ ಶಾಲಾ ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ನಿವೃತ್ತ ಶಿಕ್ಷಕಿ ಮೇರಿ ಟೀಚರ್ ಇನ್ನಿಲ್ಲ..!

ಬೆಳ್ತಂಗಡಿ: ಸಂತ ತೆರೇಸಾ ಪ್ರೌಢ ಶಾಲೆಯ ನಿವೃತ್ತ ಶಿಕ್ಷಕಿ ದಿ. ಶೇರಿ ಪಿರೇರಾರವರ ಪತ್ನಿ 74 ವರ್ಷದ ಮೇರಿ ಗ್ರೇಸ್ ಮೊಗ್ರಿಸ್ (ಮೇರಿ ಟೀಚರ್) ಅಸೌಖ್ಯದಿಂದ ಸೆ.23ರಂದು ಬೆಳಿಗ್ಗೆ ನಿಧನರಾಗಿದ್ದಾರೆ.

ಸಂತ ತೆರೇಸಾ ಪ್ರೌಢ ಶಾಲೆಯಲ್ಲಿ ಹಲವಾರು ವರ್ಷಗಳ ಕಾಲ ಶಿಕ್ಷಕಿಯಾಗಿ ಸೇವೆ ಸಲ್ಲಿಸಿದ ಇವರು ಸಾವಿರಾರು ಮಕ್ಕಳಿಗೆ ಪ್ರೀತಿಯಿಂದ ಪಾಠ ಹೇಳಿಕೊಡುತ್ತ ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ಶಿಕ್ಷಕಿಯಾಗಿದ್ದರು. ಇವರ ಅಗಲುವಿಕೆಗೆ ವಿದ್ಯಾರ್ಥಿಗಳು ಕಂಬನಿ ಮಿಡಿದಿದ್ದಾರೆ.

ಅನಾರೋಗ್ಯದ ಹಿನ್ನಲೆ ಕಳೆದ ಕೆಲವು ದಿನಗಳಿಂದ ಬೆಂಗಳೂರಿನ ಮಗಳ ಮನೆಯಲ್ಲಿದ್ದರು. ಬೆಂಗಳೂರಿನಿAದ ಇಂದು ರಾತ್ರಿ ಮೃತ ದೇಹವನ್ನು ಬೆಳ್ತಂಗಡಿಗೆ ತಂದು ನಾಳೆ ಸಂಜೆ 3 ಗಂಟೆಗೆ ಮನೆಯಿಂದ ಬೆಳ್ತಂಗಡಿ ಹೋಲಿ ರೆಡಿಮರ್ ಚರ್ಚ್ ಗೆ  ಪಾರ್ಥಿವ ಶರೀರದ ಅಂತಿಮ ಯಾತ್ರೆ ನಡೆದು ಪೂಜೆಯ ನಂತರ ಅಂತ್ಯ ಸಂಸ್ಕಾರ ನೆರವೇರಲಿದೆ ಎಂದು ತಿಳಿದು ಬಂದಿದೆ.

ಮೃತರು ಒಂದು ಗಂಡು, ಮೂರು ಹೆಣ್ಣು ಮಕ್ಕಳು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

error: Content is protected !!