ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ: ಗ್ರಾಮೀಣ ಪ್ರದೇಶದ ಕ್ರೀಡಾ ಪ್ರತಿಭೆಗಳಿಗೆ ಕ್ರೀಡಾ ಶೂ ಹಾಗೂ ಸಮವಸ್ತ್ರ ವಿತರಣೆ

ಬೆಳ್ತಂಗಡಿ: ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ ಇದರ ಆಶ್ರಯದಲ್ಲಿ ಸೆ.24ರಂದು ಬೆಳ್ತಂಗಡಿ ತಾಲೂಕಿನ ಗ್ರಾಮೀಣ ಪ್ರದೇಶದ ಕ್ರೀಡಾ ಪ್ರತಿಭೆಗಳಿಗೆ ಕ್ರೀಡಾ ಶೂ ಹಾಗೂ ಸಮವಸ್ತ್ರ ವಿತರಣೆ ಕಾರ್ಯಕ್ರಮ ಕೃಷ್ಣಾನುಗ್ರಹ ಸಭಾಭವನದಲ್ಲಿ ನಡೆಯಿತು.

ಬ್ಯಾಂಕ್ ಆಫ್ ಬರೋಡ ಇದರ ಜನರಲ್ ಮ್ಯಾನೇಜರ್ ಮತ್ತು ವಿಭಾಗೀಯ ಮುಖ್ಯಸ್ಥರಾದ ಗಾಯತ್ರಿ ಆರ್ ಉದ್ಘಾಟಿಸಿದರು.

ಉಜಿರೆ ಜನಾರ್ಧನ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡ್ವೆಟ್ನಾಯ ಅಧ್ಯಕ್ಷತೆಯ ಕಾರ್ಯಕ್ರಮದಲ್ಲಿ ಮುಖ್ಯ ಆತಿಥಿಗಳಾಗಿ ಬೆಳ್ತಂಗಡಿ ಪೆÇಲೀಸ್ ಠಾಣೆಯ ಪಿಎಸ್ ಐ ಧನರಾಜ್, ಎಸ್.ಡಿ.ಎಂ.ಇ ಸೊಸೈಟಿಯ ಸಿಇಒ ಪೂರಣ್ ವರ್ಮ, ವಕೀಲರಾದ ಬಿ.ಕೆ. ಧನಂಜಯ ರಾವ್, ರೋಟರಿ ಕ್ಲಬ್ ಬೆಳ್ತಂಗಡಿ ಅಧ್ಯಕ್ಷ ಅನಂತ ಭಟ್ ಮಚ್ಚಿಮಲೆ ಉಪಸ್ಥಿತರಿದ್ದರು.

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ಪ್ರಸ್ತಾಪಿಸಿ, ವಿಜಯ ಗೌಡ ಅತ್ತಾಜೆ ನಿರೂಪಿಸಿ, ರಾಜೇಶ್ ಪೈ ವಂದಿಸಿದರು.

error: Content is protected !!