ಬಳೆಂಜ ಗ್ರಾಮ ಪಂಚಾಯತ್ ಗೊಲಿದ ಗಾಂಧಿ ಗ್ರಾಮ ಪುರಸ್ಕಾರ: ಆ 02 ರಂದು ಬೆಂಗಳೂರಿನಲ್ಲಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ:

 

 

ಬೆಳ್ತಂಗಡಿ:2022-23ರ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ರಾಜ್ಯದ 233 ಗ್ರಾಮ ಪಂಚಾಯತ್ ಗಳು ಆಯ್ಕೆಯಾಗಿವೆ. ನಾಲ್ಕು ಗ್ರಾಮಗಳು ವಿಶೇಷ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿಗೆ ಆಯ್ಕೆಯಾಗಿವೆ.ಪ್ರತೀ ತಾಲೂಕಿನ ಒಂದು ಗ್ರಾಮವನ್ನು ಗಾಂಧಿ ಗ್ರಾಮ ಪುರಸ್ಕಾರಕ್ಕೆ ಪರಿಗಣಿಸಲಾಗಿದ್ದು  ಬೆಳ್ತಂಗಡಿ ತಾಲೂಕಿನ ಬಳೆಂಜ ಗ್ರಾಮ ಪಂಚಾಯತ್ ಗೆ   ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ ಒಲಿದಿದೆ.ಪ್ರಶಸ್ತಿ ಪ್ರಧಾನ ಕಾರ್ಯಕ್ರಮವು ಆಕ್ಟೋಬರ್ 02 ರಂದು ಬೆಳಿಗ್ಗೆ 10 ಗಂಟೆಗೆ ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆಯಲಿದೆ.ಕಾರ್ಯಕ್ರಮದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸೇರಿದಂತೆ ಅಧ್ಯಕ್ಷರು ಉಪಾಧ್ಯಕ್ಷರು ಪ್ರಶಸ್ತಿ ಸ್ವೀಕರಿಸಲು ತೆರಳಲಿದ್ದಾರೆ.ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಸೇರಿದಂತೆ ವಿವಿಧ ಗಣ್ಯರು ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಉಳಾಯಿಬೆಟ್ಟು,ಮೂಡಬಿದ್ರೆ ಯ ಪುತ್ತಿಗೆ, ಬಂಟ್ವಾಳದ ಅಮ್ಮುಂಜೆ, ಪುತ್ತೂರಿನ ಉಪ್ಪಿನಂಗಡಿ, ಕಡಬದ ಸವಣೂರು, ಸುಳ್ಯದ ಮರ್ಕಂಜ, ಮುಲ್ಕಿಯ ಕೆಮ್ರಾಲ್, ಉಳ್ಳಾಲದ ಬೆಳ್ಮ ಗ್ರಾಮ ಪಂಚಾಯತ್ ಗಳು ಪುರಸ್ಕಾರಕ್ಕೆ ಆಯ್ಕೆಯಾಗಿವೆ.

error: Content is protected !!