ಪುಂಜಾಲಕಟ್ಟೆ : ಕಲಾ ಸರಸ್ವತಿ ನೃತ್ಯ ತಂಡ ಊರ್ಲ ಪುಂಜಾಲಕಟ್ಟೆ ಇದರ ಪ್ರಥಮ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಅ.1ರಂದು ಬೆಳಗ್ಗೆ 9ರಿಂದ ಮಧ್ಯಾಹ್ನ 1ಗಂಟೆಯ ವರೆಗೆ ಊರ್ಲ ಅಂಗನವಾಡಿ ಕೇಂದ್ರದ ವಠಾರದಲ್ಲಿ ಉಚಿತ ನೇತ್ರ ತಪಾಸಣೆ ಶಿಬಿರ ನಡೆಯಲಿದೆ.
ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಮಂಗಳೂರು, ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ (ಅಂಧತ್ವ ವಿಭಾಗ), ಮಂಗಳೂರು, ಡಾ.ಪಿ. ದಯಾನಂದ ಪೈ ಮತ್ತು ಸತೀಶ್ ಪೈ ಚಾರಿಟೇಬಲ್ ಟ್ರಸ್ಟ್ (ರಿ.) ಸೆಂಚುರಿ ಗ್ರೂಪ್ಸ್, ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ನೇತ್ರ ತಪಾಸಣೆ ಶಿಬಿರ ನಡೆಯಲಿದೆ.
ಶಿಬಿರದಲ್ಲಿ ಕಣ್ಣಿನ ಸಂಪೂರ್ಣ ತಪಾಸಣೆ, ಅಗತ್ಯವುಳ್ಳವರಿಗೆ ರಿಯಾಯಿತಿ ದರದಲ್ಲಿ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ, ನೇತ್ರದಾನ ಮಾಡಲಿಚ್ಚಿಸುವವರಿಗೆ ಅರ್ಜಿ ನೋಂದಣೆಗೆ ಅವಕಾಶ, ರಿಯಾಯಿತಿ ದರದಲ್ಲಿ ಕನ್ನಡಕ, ಇತರೆ ಆರೋಗ್ಯ ಸಮಸ್ಯೆಗಳ ತಪಾಸಣೆ ನಡೆಯಲಿದೆ.
ಸಾರ್ವಜನಿಕರು ಈ ಶಿಬಿರದ ಪ್ರಯೋಜನ ಪಡೆದುಕೊಳ್ಳುವಂತೆ ಕಲಾ ಸರಸ್ವತಿ ನೃತ್ಯ ತಂಡದ ಅಧ್ಯಕ್ಷರು, ಸರ್ವ ಸದಸ್ಯರು ವಿನಂತಿಸಿಕೊಂಡಿದ್ದಾರೆ.