ಬೆಳ್ತಂಗಡಿ: ಯೋಧರ ಉದ್ಯಾನ ನಿರ್ಮಾಣಕ್ಕಾಗಿ ‘ನಮ್ಮ ಮಣ್ಣು ನಮ್ಮ ದೇಶ ಕಾರ್ಯಕ್ರಮ’ : ಧಾರ್ಮಿಕ ಕ್ಷೇತ್ರ ಹಾಗೂ ಯೋಧರ ಮನೆಯಿಂದ ಮಣ್ಣು ಸಂಗ್ರಹ ಸಂತಸ ವ್ಯಕ್ತಪಡಿಸಿದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಆಶ್ರಯದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದೀಜಿಯವರ ಕಲ್ಪನೆಯ ‘ನಮ್ಮ ಮಣ್ಣು ನಮ್ಮ ದೇಶ’ ಕಾರ್ಯಕ್ರಮ ಬೆಳ್ತಂಗಡಿ ಮಂಜುನಾಥ ಸಭಾಭವನದ ಪಿನಾಕಿ ಹಾಲ್ ನಲ್ಲಿ ಅ.03ರಂದು ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ, ಶಾಸಕ ಹರೀಶ್ ಪೂಂಜ  ಇಡೀ ಭಾರತ ಒಂದು ಎಂಬುದನ್ನು ಮತ್ತೊಮ್ಮೆ ತೋರಿಸಿಕೊಡುವ ನಿಟ್ಡಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೆಹಲಿಯ ಕರ್ತವ್ಯಪಥದಲ್ಲಿ ನಿರ್ಮಿಸಲು ಉದ್ಧೇಶಿಸಿರುವ ಯೋಧರ ಉದ್ಯಾನಕ್ಕೆ ದೇಶದ ಎಲ್ಲಾ ಧಾರ್ಮಿಕ ಕ್ಷೇತ್ರ, ಯೋಧರ ಮನೆಯ ಮಣ್ಣು ಸಂಗ್ರಹಿಸಿ, ಸಮರ್ಪಿಸುವ ಮೂಲಕ ನಮಗೂ ಸಂತೋಷದ ಭಾವನೆ ಉಂಟಾಗಿದೆ ಎಂದರು.

ಕಾರ್ಯಕ್ರಮದಲ್ಲಿ ತಾಲೂಕಿನ ಎಲ್ಲಾ ಗ್ರಾಮ ಪಂಚಾಯತ್ ವ್ಯಾಪ್ತಿಯಿಂದ ತಂದ ಮಣ್ಣಗಳನ್ನು ಪ್ರಮುಖರು ಸಮರ್ಪಿಸಿದರು.

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಅಧ್ಯಕ್ಷ ಜಯಂತ ಕೋಟ್ಯಾನ್ ಅಧ್ಯಕ್ಷತೆ ನಡೆದ ಈ ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಳಾದ ರಾಮದಾಸ್ ಬಂಟ್ವಾಳ, ಕಸ್ತೂರಿ ಪಂಜ, ಜಿಲ್ಲಾ ಉಪಾಧ್ಯಕ್ಷ ಕೊರಗಪ್ಪ ನಾಯ್ಕ, ಜಿಲ್ಲಾ ಕಾರ್ಯದರ್ಶಿ ಧನಲಕ್ಷ್ಮೀ, ನಮ್ಮ ದೇಶ ನಮ್ಮ ಮಣ್ಣು ಕಾರ್ಯಕ್ರಮ ದ.ಜಿಲ್ಲಾ ಸಹಸಂಚಾಲಕ ಸಂದೇಶ್ ಶೆಟ್ಟಿ ಉಪಸ್ಥಿತರಿದ್ದರು.

ಮಂಡಲ ಉಪಾಧ್ಯಕ್ಷ ಸೀತಾರಮ ಬಿ.ಎಸ್. ಸ್ವಾಗತಿಸಿದರು. ಮಂಡಲ ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ ವಂದೇಮಾತರಂ ಹಾಡಿದರು.

ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ರಾವ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

error: Content is protected !!