ಸಿಕ್ಕಿಂ : ಉತ್ತರ ಸಿಕ್ಕಿಂನ ಲೋನಕ ಸರೋವರದ ಬಳಿ ಹಠಾತ್ ಮೇಘಸ್ಪೋಟ ಸಂಭವಿಸಿದ್ದು ಇಲ್ಲಿಯ ತೀಸ್ತಾ ನದಿಯ ನೀರಿನ ಮಟ್ಟ ದಿಢೀರ್ ಏರಿಕೆಯಾಗಿ ಅನೇಕ ಪ್ರದೇಶಗಳು ಜಲಾವೃತಗೊಂಡಿವೆ.
ನದಿ ಪ್ರಾಂತ್ಯದಲ್ಲಿ ನಿರ್ಮಿಸಲಾಗಿದ್ದ ಸೇನಾ ನೆಲೆಗಳಿಗೂ ಪ್ರವಾಹ ನುಗ್ಗಿ 23 ಯೋಧರು ನಾಪತ್ತೆಯಾಗಿದ್ದಾರೆ. ಜೊತೆಗೆ ಸೇನಾ ವಾಹನಗಳು ಕೊಚ್ಚಿಹೋಗಿವೆ. ಚುಂಗ್‍ತಾಂಗ್ ಅಣೆಕಟ್ಟಿನಿಂದ ನೀರನ್ನು ಬಿಡುಗಡೆ ಮಾಡಿದರಿಂದ ನದಿಯ ನೀರಿನ ಮಟ್ಟ ಮತ್ತಷ್ಟು ಏರಿಕೆ ಕಂಡಿದ್ದು ಮೆಲ್ಲಿಯ ರಾಷ್ಟ್ರೀಯ ಹೆದ್ದಾರಿ 10 ಕೂಡ ಸಂಪೂರ್ಣವಾಗಿ ಕೊಚ್ಚಿ ಹೋಗಿದೆ. ತಗ್ಗು ಪ್ರದೇಶಗಳಲ್ಲಿನ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಅಲ್ಲಿನ ಆಡಳಿತ ಎಚ್ಚರಿಕೆ ನೀಡಿದೆ.
ಘಟನಾ ಸ್ಥಳಕ್ಕೆ ರಕ್ಷಣಾ ತಂಡಗಳು ಆಗಮಿಸಿದ್ದು ನಾಪತ್ತೆಯಾದ ಯೋಧರಿಗಾಗಿ ತೀವ್ರ ಕಾರ್ಯಾಚರಣೆ ಕೈಗೊಂಡಿದೆ.