ಕಳೆಂಜ , ಅರಣ್ಯಾಧಿಕಾರಿಗೆ ಶಾಸಕ ಹರೀಶ್ ಪೂಂಜ ಕೀಳು ಪದ ಬಳಕೆ:ಕರ್ನಾಟಕ ರಾಜ್ಯ ವಲಯ ಅರಣ್ಯಾಧಿಕಾರಿಗಳ ಸಂಘ ಖಂಡನೆ..!

 


ಬೆಳ್ತಂಗಡಿ : ಕಳೆಂಜ ಅಮ್ಮಿನಡ್ಕದ ಮೀಸಲು ಅರಣ್ಯ ಪ್ರದೇಶದ ಜಾಗದಲ್ಲಿ ಅ.06ರಿಂದ ಅ.09ರವರೆಗೆ ನಡೆದ ತಕಾರರು ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ ಉಪ್ಪಿನಂಗಡಿ ಅರಣ್ಯಾಧಿಕಾರಿ ಜಯಪ್ರಕಾಶ್ ಕೆ.ಕೆಯವರಿಗೆ ಅವ್ಯಾಚ ಶಬ್ದ ಉಪಯೋಗಿಸಿ ಮಾತನಾಡಿದ್ದನ್ನು ಕರ್ನಾಟಕ ರಾಜ್ಯ ವಲಯ ಅರಣ್ಯಾಧಿಕಾರಿ ಸಂಘ(ರಿ) ಬೆಂಗಳೂರು ಖಂಡಿಸಿ ಪತ್ರಿಕಾ ಪ್ರಕಟಣೆ ಹೊರಡಿಸಿದೆ.

ಮಂಗಳೂರು ವಿಭಾಗದ ಉಪ್ಪಿನಂಗಡಿ ವಲಯದ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಅಮ್ಮಿನಡ್ಕ ನಿಡ್ಲೆ ವಿಸ್ತೃತ ಬ್ಲಾಕ್-2 ಮೀಸಲು ಅರಣ್ಯ ಪ್ರದೇಶದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳ ನೇತೃತ್ವದಲ್ಲಿ ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ಜಯಪ್ರಕಾಶ್ ಕೆಕೆ ಹಾಗೂ ಸಿಬ್ಬಂದಿಯವರು ಒತ್ತುವರಿ ತೆರವುಗೊಳಿಸುವ ಸಮಯದಲ್ಲಿ ಮಾನ್ಯ ಬೆಳ್ತಂಗಡಿ ಶಾಸಕರು ಹರೀಶ್ ಪೂಂಜ ಸಾರ್ವಜನಿಕವಾಗಿ ವಲಯ ಅರಣ್ಯಾಧಿಕಾರಿ ಜಯಪ್ರಕಾಶ್ ಕೆಕೆ ಅವರಿಗೆ ಅವ್ಯಾಚ ಶಬ್ದದ ಉಪಯೋಗಿಸಿ ನಿಂದಿಸಿರುವುದು ಖಂಡನೀಯ ಆ ಅವ್ಯಾಚ ಶಬ್ದದ ಬಗ್ಗೆ ಕನಿಷ್ಠ ಸೌಜನ್ಯಕ್ಕಾದರೂ ಕ್ಷಮೆ ವ್ಯಕ್ತಪಡಿಸುವುದು ಗೌರವನ್ವಿತ ಮಾನ್ಯ ಶಾಸಕರಿಗೆ ಶೋಭೆತರುವಂತಹುದಲ್ಲ. ಈ ಕೃತ್ಯವನ್ನು ಕರ್ನಾಟಕ ರಾಜ್ಯ ವಲಯ ಅರಣ್ಯಾಧಿಕಾರಿಯವರ ಸಂಘ (ರಿ) ಬೆಂಗಳೂರು ಸಂಘವು ಕಠಿಣ ಶಬ್ದಗಳಲ್ಲಿ ಖಂಡಿಸುತ್ತದೆ. ಅಧಿಕಾರಿಗಳಾಗಲೀ , ಸಾರ್ವಜನಿಕರಾಗಲೀ, ಜನಪ್ರಿತಿನಿಧಿಗಳಾಗಲೀ ಅಥವಾ ಗೌರವಾನ್ವಿತ ಶಾಸಕರುಗಳಾಗಲೀ ಈ ನೆಲದ ಕಾನೂನನ್ನು ಪಾಲಿಸಬೇಕಾಗಿರುತ್ತದೆ. ಕಾನೂನಿಗಿಂತ ಯಾರು ಮಿಗಿಲಾಗಿರುವುದಿಲ್ಲ. ಒಂದು ವೇಳೆ ವಲಯ ಅರಣ್ಯಾಧಿಕಾರಿಗಳು ಏನೇ ಕರ್ತವ್ಯಚ್ಚುತಿ ಮಾಡಿದ್ದರೂ ಅದನ್ನು ಕಾನೂನಿನ ವ್ಯಾಪ್ತಿಯಲ್ಲೇ ಬಗೆಹರಿಸಿಕೊಳ್ಳಬೇಕಾಗಿರುವುದು ಶಾಸಕರಿಗೆ ತಿಳಿಯದೇ ಇರುವ ವಿಷಯವೇನಲ್ಲ. ಅಗ್ಗದ್ದಗ್ಯೂ ಮಾನ್ಯ ಗೌರವನ್ವಿತ ಶಾಸಕರು ಸಾರ್ವಜನಿಕವಾಗಿ ವಲಯ ಅರಣ್ಯಾಧಿಕಾರಿಗೆ ತನ್ನ ಶಾಸಕರು ಬದ್ದಕರ್ತವ್ಯ ನಿರ್ವಹಿಸುವ ಸಮಯದಲ್ಲಿ ಕರ್ತವ್ಯಕ್ಕೆ ಅಡ್ಡಿಉಂಟುಮಾಡಿ ಅವಾಚ್ಯವಾಗಿ ನಿಂಧಿಸಿರುವುದು ಅವರ ಘನತೆಗೆ ತಕ್ಕದ್ದಾಗಿರುವುದಿಲ್ಲ. ಈ ಘಟನೆಯನ್ನು ಸಂಘವು ಖಂಡಿಸುತ್ತಾ ಅರಣ್ಯ ಇಲಾಖೆಯ ಅಧಿಕಾರಿಗಳು/ಸಿಬ್ಬಂದಿಯವರಿಗೆ ಕಾನೂನಿನ ಅನ್ವಯ ಸಾರ್ವಜನಿಕ ಕೆಲಸ ನಿರ್ವಹಿಸಲು ನೈತಿಕ ಸ್ಥೈರ್ಯವನ್ನು ಸಂಘವು ನೀಡುತ್ತದೆ. ಮುಂದೆ ಇಂತಹ ಘಟನೆ ಮರುಕಳಿಸಿದ್ದಲ್ಲಿ ಹೋರಾಟಕ್ಕೂ ಸಹ ಸಂಘವು ಸಿದ್ದವಿರುತ್ತದೆ ಎಂದು ಪತ್ರಿಕಾ ಪ್ರಕಟಣೆ ಮೂಲಕ ಎಚ್ಚರಿಗೆ ನೀಡಿದೆ.

error: Content is protected !!