ಹೊಸ ಸೂಪರ್ ಸ್ಪೆಷಾಲಿಟಿ ಬ್ಲಾಕ್‍ನ ಶಸ್ತ್ರ ಚಿಕಿತ್ಸೆ ಕೊಠಡಿ ಮತ್ತು ವಾರ್ಡ್‍ಗಳಿಗೆ ಉಪಕರಣಗಳ ಕೊರತೆ: ದ.ಕ ಜಿಲ್ಲಾ ಉಸ್ತುವಾರಿ ಸಚಿವರನ್ನು ಭೇಟಿಯಾದ ಬೆಳ್ತಂಗಡಿ ಮಾಜಿ ಶಾಸಕ ಕೆ, ವಸಂತ ಬಂಗೇರ: ಸರಕಾರಿ ವೆನ್ ಲಾಕ್ ಜಿಲ್ಲಾ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸಭೆ ಕರೆಯುವಂತೆ ಮನವಿ

ಬೆಳ್ತಂಗಡಿ: ಬಡಜನತೆಗೆ ನೆರವಾಗುವ ಮಂಗಳೂರಿನ ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಹೊಸ ಸೂಪರ್ ಸ್ಪೆಷಾಲಿಟಿ ಬ್ಲಾಕ್‍ನ ಶಸ್ತ್ರ ಚಿಕಿತ್ಸೆ ಕೊಠಡಿ ಮತ್ತು ವಾರ್ಡ್‍ಗಳಿಗೆ ಉಪಕರಣಗಳನ್ನು ಅಳವಡಿಸುವಂತೆ ಸೂಕ್ತ ನಿರ್ದೆಶನ ನೀಡಬೇಕೆಂದು ಬೆಳ್ತಂಗಡಿ ಮಾಜಿ ಶಾಸಕ ಕೆ, ವಸಂತ ಬಂಗೇರ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಿಗೆ ಅ.12ರಂದು ಮನವಿ ನೀಡಿದ್ದಾರೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿದ ಕೆ. ವಸಂತ ಬಂಗೇರ ಅವರು, ಈಗಾಗಲೇ ವೆನ್‍ಲಾಕ್ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯಿಂದ 2 ಕೋಟಿ, ಕೆ.ಎಂ.ಸಿ ಆಸ್ಪತ್ರೆಯಿಂದ 2 ಕೋಟಿ ಹಾಗೂ ಸ್ಮಾರ್ಟ್ ಸಿಟಿ ಯೋಜನೆಯಿಂದ 6 ಕೋಟಿ ಅನುದಾನ ನೀಡುವಂತೆ ತಾವು ಆದೇಶ ನೀಡಿದ್ದರೂ ಆರೋಗ್ಯ ರಕ್ಷಾ ಸಮಿತಿಯ ಅನುಮೋದನೆ ಅಗತ್ಯವಿರುವುದರಿಂದ ತಕ್ಷಣ ಸದ್ರಿ ಸಮಿತಿಯ ಸಭೆ ಕರೆದು ಸೂಕ್ತ ನಿರ್ದೆಶನ ನೀಡಬೇಕೆಂದು ಮನವಿ ನೀಡಿದರು.

ಮನವಿಗೆ ಸ್ಪಂದಿಸಿದ ಸಚಿವರು ಮುಂದಿನ ದ.ಕ ಜಿಲ್ಲಾ ಪ್ರವಾಸದ ಸಂದರ್ಭದಲ್ಲಿ ಸಭೆ ಕರೆಯುವುದಾಗಿ ಭರವಸೆ ನೀಡಿದ್ದಾರೆ.

error: Content is protected !!