ಭೀಕರ ರಸ್ತೆ ಅಪಘಾತ..! : 12 ಮಂದಿ ಸಾವು : ಮೂವರ ಸ್ಥಿತಿ ಗಂಭೀರ..!

ಚಿಕ್ಕಬಳ್ಳಾಪುರ : ಸಿಮೆಂಟ್ ಬಲ್ಕರ್ ಲಾರಿಗೆ ಟಾಟಾ ಸುಮೊ ಡಿಕ್ಕಿ ಹೊಡೆದ ಪರಿಣಾಮ 12 ಮಂದಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 44ರ ಚಿತ್ರಾವತಿ ಎಂಬಲ್ಲಿ ಹೆದ್ದಾರಿ ಬದಿ ನಿಂತಿದ್ದ ಸಿಮೆಂಟ್ ಬಲ್ಕರ್ ಲಾರಿಗೆ 15 ಮಂದಿ ಪ್ರಯಾಣಿಸುತ್ತಿದ್ದ ಟಾಟಾ ಸುಮೊ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ 12 ಮಂದಿ ಸಾವನ್ನಪ್ಪಿದ್ದು ಉಳಿದ ಮೂವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು ,  ಮೃತರೆಲ್ಲರೂ ಆಂಧ್ರಪ್ರದೇಶದವರು ಎಂದು ತಿಳಿದು ಬಂದಿದೆ.

ಟಾಟಾ ಸುಮೊ ಬಾಗೇಪಲ್ಲಿಯಿಂದ ಬೆಂಗಳೂರು ಕಡೆ ಹೋಗುತ್ತಿತ್ತು. ದಟ್ಟ ಮಂಜು ಹಿನ್ನೆಲೆ ಟಾಟಾ ಸುಮೊ ಚಾಲಕನಿಗೆ ಸರಿಯಾಗಿ ರಸ್ತೆ ಕಾಣಿಸಿಲ್ಲ. ಇದರಿಂದ ರಸ್ತೆಬಂದಿ ನಿಂತಿದ್ದ ಲಾರಿ ಹಿಂಬದಿಗೆ ಡಿಕ್ಕಿ ಹೊಡೆದಿದೆ. ಗುದ್ದಿದ ರಭಸಕ್ಕೆ ಟಾಟಾ ಸುಮೊ ಮುಂದಿನ ಭಾಗ ನಜ್ಜುಗುಜ್ಜಾಗಿದೆ. ಇಬ್ಬರು ಮಹಿಳೆಯರು ಮತ್ತು 10 ಪುರುಷರು ಮೃತಪಟ್ಟಿದ್ದಾರೆ. ಇದರಲ್ಲಿ ಐವರು ಸ್ಥಳದಲ್ಲೇ ಮೃತಪಟ್ಟರೆ, ಏಳು ಮಂದಿ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ.

error: Content is protected !!