ಉಜಿರೆ: ಚೂರಿ ಇರಿತ: ತಂದೆಯ ಕೋಪಕ್ಕೆ ಮಗ ಬಲಿ..!

ಬೆಳ್ತಂಗಡಿ : ತಂದೆ ಮತ್ತು ಮಗನ ನಡುವೆ ನಡೆದ ಕ್ಷುಲ್ಲಕ ಕಾರಣದ ಜಗಳವೊಂದು ಮಗನ ಕೊಲೆಯೊಂದಿಗೆ ಅಂತ್ಯವಾದ ಘಟನೆ ಉಜಿರೆ ಗ್ರಾಮದಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಕೊಡೆಕಲ್ಲು ನಿವಾಸಿ ಕೃಷ್ಣಯ್ಯ ಆಚಾರಿ ಎಂಬವರು ಅ.29ರಂದು ಎಂದಿನಂತೆ ಮಲಗಿರುವ ವೇಳೆ ಅವರ ಮಗ ಜಗದೀಶ್ ಆಚಾರಿ ಅವರು ತಂದೆಯೊಂದಿಗೆ ಯಾವುದೋ ಕಾರಣಕ್ಕೆ ಮಾತು ಆರಂಭಿಸಿದ್ದು, ಇದು ಮಾತಿಗೆ ಮಾತು ಬೆಳೆದು ಕೋಪಗೊಂಡ ತಂದೆ ಮಗನ ಕುತ್ತಿಗೆಗೆ ಚೂರಿಯಿಂದ ಇರಿದಿದ್ದಾರೆ.

ಈ ವೇಳೆ ಗಂಭೀರವಾಗಿ ಗಾಯಗೊಂಡ ಜಗದೀಶ್ ಅವರನ್ನು ಮನೆಯವರು ಸೇರಿ ಉಜಿರೆಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆದರೆ ಆಸ್ಪತ್ರೆಯಲ್ಲಿ ಗಾಯಗೊಂಡ ಜಗದೀಶ್ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ದೃಢಪಡಿಸಿದ್ದಾರೆ.

ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರು ಖಾಸಗಿ  ಆಸ್ಪತ್ರೆಯಲ್ಲಿ  ಜಗದೀಶ್ ಮೃತದೇಹದ ಪರೀಕ್ಷೆ ನಡೆಸಲಾಗುವುದು ಎಂದು ತಿಳಿದುಬಂದಿದೆ.

 

error: Content is protected !!