ಉಜಿರೆಯ ಎಸ್.ಡಿ.ಎಂ. ಪ್ರಕೃತಿಚಿಕಿತ್ಸಾ ಮತ್ತು ಯೋಗವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಡಾ. ಪ್ರಶಾಂತ್ ಶೆಟ್ಟಿ ಮುಡಿಗೇರಿದ ರಾಜ್ಯೋತ್ಸವ ಪ್ರಶಸ್ತಿ

ಉಜಿರೆ: ಎಸ್.ಡಿ.ಎಂ. ಪ್ರಕೃತಿಚಿಕಿತ್ಸಾ ಮತ್ತು ಯೋಗವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಡಾ. ಪ್ರಶಾಂತ್ ಶೆಟ್ಟಿ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ

ಭಾರತ ಸರ್ಕಾರದ ಆಯುಷ್ ಮಂತ್ರಾಲಯದ ಟಾಸ್ಕ್ಪೋರ್ಸ್ ಸದಸ್ಯರಾಗಿ, ಅಭಿವೃದ್ಧಿ ಮಂಡಳಿ ಸದಸ್ಯರಾಗಿ, ಹಾಗೂ ರಾಜ್ಯದ ರಾಜೀವ್ ಗಾಂಧಿ ಆರೋಗ್ಯ ವಿ.ವಿ.ಯಲ್ಲಿ ಸೆನೆಟ್ ಸದಸ್ಯರಾಗಿ, ಪ್ರಸ್ತುತ ಕರ್ನಾಟಕ ಸರ್ಕಾರದ ಪ್ರಕೃತಿ ಚಿಕಿತ್ಸೆ ಮತ್ತು ಯೋಗದ ಸಲಹಾ ಮಂಡಳಿ ಸದಸ್ಯರಾಗಿ, ರಾಜೀವ್ ಗಾಂಧಿ ವಿ.ವಿ.ಯ ಅಕಾಡೆಮಿಕ್ ಕೌನ್ಸಿಲ್ ಸದಸ್ಯರಾಗಿ ಸೇವೆ ಸಲ್ಲಿಸುತ್ತಿರುವ ಇವರು ಮೂಲತಃ ದಕ್ಷಿಣಕನ್ನಡ ಜಿಲ್ಲೆಯ ಕಾರ್ಕಳ ತಾಲ್ಲೂಕಿನ ಹೆಬ್ರಿಯ ಮಾಬ್ಳಿಯವರು.

1994 ರಲ್ಲಿ ಉಜಿರೆಯಲ್ಲಿರುವ ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಕಾಲೇಜಿನಲ್ಲಿ ಪ್ರಥಮ ಬ್ಯಾಚಿನ ವಿದ್ಯಾರ್ಥಿಯಾಗಿ ಬಿ.ಎನ್.ವೈ.ಎಸ್. ಪದವಿ ಪಡೆದಿದ್ದು, ಅದೇ ಕಾಲೇಜಿನಲ್ಲಿ ಉಪನ್ಯಾಸಕರಾಗಿ, ವೈದ್ಯಾಧಿಕಾರಿಯಾಗಿ ವೃತ್ತಿ ಜೀವನ ಪ್ರಾರಂಭಿಸಿದರು. 2006ರಲ್ಲಿ ಬೆಂಗಳೂರಿನಲ್ಲಿ ಎಸ್.ವ್ಯಾಸ ಯೋಗ ವಿಶ್ವವಿದ್ಯಾಲಯದಲ್ಲಿ ಯೋಗ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದರು. 2014ರಲ್ಲಿ ಅದೇ ವಿಶ್ವವಿದ್ಯಾಲಯದಿಂದ ಪಿ.ಎಚ್.ಡಿ. ಪದವಿ ಪಡೆದರು.

ಇವರ ಸೇವೆ, ಸಾಧನೆಯನ್ನು ಗುರುತಿಸಿ ಪ್ರಮುಖ ಶಿಕ್ಷಕರ ಪ್ರಶಸ್ತಿ, ಡಾ. ಬಿ.ಸಿ. ರಾಯ್ ರಾಷ್ಟಿçÃಯ ಪ್ರಶಸ್ತಿ, ವಸಿಷ್ಠ ಪ್ರಶಸ್ತಿ, ಅತ್ಯುತ್ತಮ ಆಯುಷ್ ವೈದ್ಯ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

error: Content is protected !!