ಬೆಳ್ತಂಗಡಿ : ಸಿ.ಎಂ ಸಿದ್ದರಾಮಯ್ಯ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಬಿಜೆಪಿ ಕಾರ್ಯಕರ್ತನ ವಿರುದ್ಧ ನ.19 ರಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ರೀತಿಯಲ್ಲಿ ಮಾತಾನಾಡಿದ ಆಡಿಯೋ ವೈರಲ್ ಆಗಿದ್ದು, ಈ ಬಗ್ಗೆ ಕಾಂಗ್ರೆಸ್ ಕಾರ್ಯಕರ್ತರು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ನ.19 ರಂದು ಸಂಜೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಕೋರಿಗದ್ದೆ ನಿವಾಸಿಯಾಗಿರುವ ಬಿಜೆಪಿ ಕಾರ್ಯಕರ್ತ ರಜಿತ್ ಕೊಕ್ಕಡ @ ರಜಿತ್ ಭಂಡಾರಿ ಎಂಬಾತ ಮತ್ತೊಬ್ಬ ವ್ಯಕ್ತಿಯೊಂದಿಗೆ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಯ್ಯನವರಿಗೆ ಕೆಟ್ಟ ಪದಗಳಿಂದ ಬೈದು, ಅಶ್ಲೀಲವಾಗಿ ನಿಂದಿಸಿ, ಆ ಸಂಭಾಷಣಾ ವಾಯ್ಸ್ ರೆಕಾರ್ಡ್ ನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದರು. ಇದರ ಬಗ್ಗೆ ಬೆಳ್ತಂಗಡಿ ಕಾಂಗ್ರೆಸ್ ಕಾರ್ಯಕರ್ತರು ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಆರೋಪಿಯ ವಿರುದ್ಧ ಐಪಿಸಿ 1860 (u/s 153A,504,505(2)) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.