ಕಕ್ಕಿಂಜೆ ಇನೋವಾ ಕಾರು ಕಳ್ಳತನ ಪ್ರಕರಣ: ನಾಲ್ವರನ್ನು   ಬಂಧಿಸಿದ ಧರ್ಮಸ್ಥಳ ಪೊಲೀಸರು:

 

 

 

 

ಬೆಳ್ತಂಗಡಿ : ಮನೆಯ ಶೆಡ್ಡ್ ನಲ್ಲಿ ನಿಲ್ಲಿಸಿದ್ದ ಇನೋವಾ ಕಾರನ್ನು ಕಳ್ಳತನ ಮಾಡಿದ ಪ್ರಕರಣವನ್ನು 14 ದಿನದಲ್ಲಿ ಭೇದಿಸಿ ನಾಲ್ಕು ಜನರನ್ನು ಬಂಧಿಸುವಲ್ಲಿ ಧರ್ಮಸ್ಥಳ ಪೊಲೀಸರು ಯಶಸ್ವಿಯಾಗಿದ್ದಾರೆ.

*ಘಟನೆ ವಿವರ:* ಬೆಳ್ತಂಗಡಿ ತಾಲೂಕು ಚಾರ್ಮಾಡಿ ಗ್ರಾಮದ ಕಕ್ಕಿಂಜೆ ಎಂಬಲ್ಲಿ ನವೆಂಬರ್ 9 ರಂದು ರಾತ್ರಿ 10 ಗಂಟೆ ಸಮಯಕ್ಕೆ ಇಸಾಕ್‌ ಎಂಬವರ ಅಕ್ಕನ ಮಗ ನೌಫಲ್‌ ಎಂಬವರು ತಮ್ಮ ಕಾರ್ ಶೆಡ್ಡಿನಲ್ಲಿ KA-02-MD-9042 ನೇ ಸಂಖ್ಯೆಯ ಇನ್ನೋವಾ ಕಾರನ್ನು ನಿಲ್ಲಿಸಿದ್ದು. ನವೆಂಬರ್ 10 ರಂದು ಬೆಳಿಗ್ಗೆ 6:30 ಗಂಟೆಗೆ ನೋಡಿದಾಗ ಕಾರು ಶೆಡ್ಡಿನಲ್ಲಿ ಕಾಣದೇ ಇರುವುದರಿಂದ ಈ ಬಗ್ಗೆ ಆಸುಪಾಸುಗಳಲ್ಲಿ ಹುಡುಕಾಡಿದರೂ ಪತ್ತೆಯಾಗದೇ ಇದ್ದು ಈ ಮೊದಲು ನೌಫಾಲ್ ನ ಗೆಳೆಯ ಸೈಪುದ್ದಿನ್ ಎಂಬಾತನ ಗೆಳೆಯರಾದ ಸೂರಜ್ ಶೆಟ್ಟಿ ಮತ್ತು ಅಜಯ್ ಶೆಟ್ಟಿಯವರು ಸದ್ರಿ ಕಾರನ್ನು ಬಾಡಿಗೆಗೆ ನೀಡುವಂತೆ ಕೇಳಿದಾಗ ನೀಡದೇ ಇದ್ದುದ್ದರಿಂದ ಸದ್ರಿ ಕಾರನ್ನು ಸೂರಜ್ ಶೆಟ್ಟಿ ಮತ್ತು ಅಜಯ್ ಶೆಟ್ಟಿ ಯವರು ಕಳವು ಮಾಡಿ ತೆಗೆದುಕೊಂಡು ಹೋಗಿರುವ ಬಗ್ಗೆ ಸಂಶಯ ಇರುತ್ತದೆ. ಕಳವಾದ ಇನ್ನೋವಾ ಕಾರಿನ ಈಗಿನ ಮೌಲ್ಯ ರೂಪಾಯಿ 2,25,000/- ಆಗಬಹುದು ಎಂಬುವುದಾಗಿ ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಕಲಂ 379 IPC ಅಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸರ ತಂಡ ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ನಡೆಸಿ ನ.24 ರಂದು ಕಳ್ಳತನವಾದ ಇನೋವಾ ಕಾರು ಸಮೇತ ಪ್ರಕರಣದ ನಾಲ್ಕು ಜನ ಕಳ್ಳತನ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

*ಆರೋಪಿಗಳ ವಿವರ:* ಆರೋಪಿಗಳಾದ ಮಂಗಳೂರು ಕಿನ್ನಿಗೋಳಿ ತಾಳಿಪ್ಪಡಿ ಗ್ರಾಮದ ಉಮಾ ನಿವಾಸಿ ಜಯರಾಮ ಶೆಟ್ಟಿ ಮಗ ಅಜಯ್ ಶೆಟ್ಟಿ(32) ,ಬೆಳ್ತಂಗಡಿ ತಾಲೂಕಿನ ಸೋಣಂದೂರು ಗ್ರಾಮದ ಗಾಣದಬೆಟ್ಟು ನಿವಾಸಿ ಸೂರಜ್ ಶೆಟ್ಟಿ(23), ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದ ಎನ್ಮಾಡಿ ನಿವಾಸಿ ಮಂಜುನಾಥ ಪೂಜಾರಿ(30), ಬಂಟ್ವಾಳ ತಾಲೂಕಿನ ಶಂಭೂರು ಗ್ರಾಮದ ಪರೆಕಲ್ ನಿವಾಸಿ ಪೂವಪ್ಪ ಪೂಜಾರಿ ಮಗ ಕಿಶೋರ್‌.ಟಿ(32) ಎಂಬವರನ್ನು ನ.24 ರಂದು ಬೆಳಗ್ಗೆ ವಶಕ್ಕೆ ಪಡೆದು ಅವರು ಕಳ್ಳತನಗೈದಿದ್ದ KA-02-MD -9042 ನಂಬರಿನ ಇನ್ನೋವಾ ಕಾರನ್ನು ಸ್ವಾದೀನಪಡಿಸಿಕೊಂಡು ನಂತರ ವಿಚಾರಣೆ ನಡೆಸಿ ಆರೋಪಿಗಳನ್ನು ಬಂಧಿಸಿ ಮಾನ್ಯ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು.ನ್ಯಾಯಾಲಯ ನಾಲ್ಕು ಜನ ಆರೋಪಿಗಳಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ರಿಷ್ಯಂತ್.ಸಿ.ಬಿ, ಹೆಚ್ಚುವರಿ ಪೊಲೀಸ್‌ ಅಧೀಕ್ಷಕರಾದ ಧರ್ಮಪ್ಪ ಎಂ.ಎನ್‌ ರವರ ನಿರ್ದೇಶನದಂತೆ ಬಂಟ್ವಾಳ ಡಿ.ವೈಎಸ್.ಪಿ ಶ್ರೀ ಪ್ರತಾಪ್‌ ಸಿಂಗ್ ಥೋರಾಟ್ ರವರ ಸೂಚನೆಯಂತೆ ಬೆಳ್ತಂಗಡಿ ವೃತ್ತ ನಿರೀಕ್ಷಕರಾದ ಶ್ರೀ ನಾಗೇಶ್ ಕದ್ರಿಯವರ ಮಾರ್ಗದರ್ಶನದಲ್ಲಿ ಧರ್ಮಸ್ಥಳ ಪೊಲೀಸ್ ಠಾಣಾ ಸಬ್ ಇನ್ಸ್ಪೆಕ್ಟರ್ ಅನೀಲ್ ಕುಮಾರ್.ಡಿ (ಕಾ&ಸು) ಮತ್ತು ಸಬ್‌ ಇನ್ಸ್ಪೆಕ್ಟರ್ ಸಮರ್ಥ ರವೀಂದ್ರ ಗಾಣಿಗೇರ (ತನಿಖೆ) ಹಾಗೂ ಸಿಬ್ಬಂದಿಗಳಾದ ಎ.ಎಸ್.ಐಗಳಾದ ಸಾಮ್ಯುವೆಲ್ ಮತ್ತು ಪೌಲೋಸ್ ಹಾಗೂ ಸಿಬ್ಬಂದಿ ರಾಜೇಶ್.ಎನ್, ಪ್ರಶಾಂತ್, ಮಂಜುನಾಥ್, ಮಲ್ಲಿಕಾರ್ಜುನ್ ಕಾರ್ಯಾಚರಣೆಯಲ್ಲಿದ್ದರು.

error: Content is protected !!