ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಶಿರ್ಲಾಲು: ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ದೇವರ ಬಾಲಾಲಯ ಪ್ರತಿಷ್ಠೆ, ಆಮಂತ್ರಣ ಪತ್ರಿಕೆ ಬಿಡುಗಡೆ, ಚಪ್ಪರ ಮುಹೂರ್ತ, ದೇವರ ಧ್ವನಿ ಸುರುಳಿ ಬಿಡುಗಡೆ:

 

 

ಬೆಳ್ತಂಗಡಿ: ಇತಿಹಾಸ ಪ್ರಸಿದ್ಧ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಶಿರ್ಲಾಲು ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವವು ಡಿ.24 ರಿಂದ ಡಿ.28 ರವರೆಗೆ ವಿವಿಧ ವೈದಿಕ, ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಲಿದ್ದು ಈ ಪ್ರಯುಕ್ತ ಪೂರ್ವಭಾವಿಯಾಗಿ ಶ್ರೀ ಕ್ಷೇತ್ರದಲ್ಲಿ ನಡೆಯುವ ದೇವರ ಬಾಲಾಲಯ ಪ್ರತಿಷ್ಠೆ, ಆಮಂತ್ರಣ ಪತ್ರಿಕೆ ಬಿಡುಗಡೆ, ಚಪ್ಪರ ಮುಹೂರ್ತ, ದೇವರ ಧ್ವನಿ ಸುರುಳಿ ಬಿಡುಗಡೆ ಕಾರ್ಯಕ್ರಮವು ಡಿ.4 ರಂದು ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸಂಘದ ಮಾಜಿ ಅಧ್ಯಕ್ಷ, ನಿವೃತ್ತ ತಹಶೀಲ್ದಾರರು ಸೋಮೇ ಗೌಡ ವಹಿಸಿದ್ದರು.

ಚಪ್ಪರ ಮುಹೂರ್ತವನ್ನು ಅಳದಂಗಡಿ‌ ಶ್ರೀ‌ಸತ್ಯದೇವತಾ ದೈವಸ್ಥಾನದ ಆಡಳಿತ ಮೊಕ್ತೇಸರ ಶಿವಪ್ರಸಾದ್ ಅಜಿಲರು ನೇರವೇರಿಸಿದರು, ಆಮಂತ್ರಣ ಪತ್ರಿಕೆ ಬಿಡುಗಡೆಯನ್ನು ಮಂಗಳೂರು ಕಂಬಳ ಸಮಿತಿಯ ಅಧ್ಯಕ್ಷ ಕ್ಯಾಪ್ಟನ್ ಬ್ರಿಜೇಶ್ ಚೌಟ ನೇರವೇರಿಸಿ ಶುಭಕೋರಿದರು. ದೇವರ ಧ್ವನಿ ಸುರುಳಿ ಬಿಡುಗಡೆಯನ್ನು ವೇಣೂರು ಸಿ.ಎ ಬ್ಯಾಂಕ್ ಅಧ್ಯಕ್ಷ ಸುಂದರ ಹೆಗ್ಡೆ ಬಿ.ಇ ನೆರವೇರಿಸಿದರು.

ವೇದಿಕೆಯಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಪ್ರಶಾಂತ್ ಎಂ ಪಾರೆಂಕಿ,ಪ್ರಧಾನ ಕಾರ್ಯದರ್ಶಿ ರವಿರಾಜ ಗೌಡ ,ದೇವಸ್ಥಾನದ ಸೇವಾ ಸಮಿತಿ ಅಧ್ಯಕ್ಷ ಆನಂದ ಸಾಲಿಯಾನ್ ಓಡಿಮಾರ್,ಶ್ರೀ ಮಹಾಲಿಂಗೇಶ್ವರ ದೇಗುಲದ ಭಜನಾ ಮಂಡಳಿ ಅಧ್ಯಕ್ಷ ಸೋಮನಾಥ ಬಂಗೇರ, ಪಲ್ಗುಣಿ ಯುವತಿ ಮಂಡಲದ ಅಧ್ಯಕ್ಷೆ ಜಯಂತಿ ಉಪಸ್ಥಿತರಿದ್ದರು.

ಶಿರ್ಲಾಲು ಸಿಎ ಬ್ಯಾಂಕ್ ಸಿಬ್ಬಂದಿ ಶಶಿಯವರು ಪ್ರಾರ್ಥನೆ ಹಾಡಿದರು.
ವಿಶ್ವನಾಥ್ ಸಾಲಿಯಾನ್ ಪುದ್ದರಬೈಲು ಕಾರ್ಯಕ್ರಮ ನಿರೂಪಿಸಿದರು. ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಪ್ರಶಾಂತ್ ಎಂ.ಪಾರೆಂಕಿ ಸ್ವಾಗತಿಸಿ ಚಂದ್ರಶೇಖರ್ ಧನ್ಯವಾದವಿತ್ತರು.

error: Content is protected !!