ದಕ್ಷಿಣ ಕನ್ನಡ ಜಿಲ್ಲೆಗೆ ಉತ್ತಮ ಮಳೆ ಸಾಧ್ಯತೆ..!: ಹವಾಮಾನ ಇಲಾಖೆಯಿಂದ ಮುನ್ಸೂಚನೆ

ದ.ಕ: ರಾಜ್ಯದ ಹಲವು ಕಡೆ ಕಳೆದ 2 ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಕರಾವಳಿ ಭಾಗದ ಜಿಲ್ಲೆಗಳಲ್ಲಿ ಮುಂದಿನ 2 ದಿನ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ವ್ಯಾಪ್ತಿಯಲ್ಲಿ ಇಂದಿನಿಂದ ಮುಂದಿನ 2 ದಿನ ವ್ಯಾಪಕ ಮಳೆಯಾಗುವ ಲಕ್ಷಣಗಳಿವೆ. ಅನೇಕ ಕಡೆ ಇಂದು ಬೆಳಗ್ಗಿನಿಂದಲೇ ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ. ಡಿ.10ರಂದು ರಾತ್ರಿ ಬೆಳ್ತಂಗಡಿ ತಾಲೂಕಿನಲ್ಲಿ ಗುಡುಗು ಸಹಿತ ಭಾರೀ ಮಳೆ ಸುರಿದಿದೆ.

error: Content is protected !!