ಹೊಸಕೋಟೆ : ರಾಜ್ಯ ಮತ್ತು ಜಿಲ್ಲಾ ಆರೋಗ್ಯಾಧಿಕಾರಿಗಳು ರಾಜ್ಯಾದ್ಯಂತ ಭ್ರೂಣ ಹತ್ಯೆ ತನಿಖೆಯನ್ನು ಆರಂಭಿಸಿದ್ದು ಈ ವೇಳೆ ಹೊಸಕೋಟೆಯ ಚನ್ನಸಂದ್ರದ ಆಸ್ಪತ್ರೆಯ ಮೇಲೆ ದಾಳಿ ಮಾಡಿದಾಗ ಹೆಣ್ಣು ಭ್ರೂಣ ಪತ್ತೆಯಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ದೇವನಹಳ್ಳಿಯ ವಿವಿಧ ಆಸ್ಪತ್ರೆಗಳ ಮೇಲೆ ಜಿಲ್ಲಾ ಆರೋಗ್ಯಾಧಿಕಾರಿಗಳ ನೇತೃತ್ವದ ಅಧಿಕಾರಿಗಳ ತಂಡ ದಾಳಿ ಮಾಡಿದ್ದು ಈ ಸಂದರ್ಭದಲ್ಲಿ ಹೊಸಕೋಟೆಯ ಚನ್ನಸಂದ್ರದ ಆಸ್ಪತ್ರೆಯಲ್ಲಿ 14 ರಿಂದ 16 ವಾರಗಳ ಭ್ರೂಣ ಪತ್ತೆಯಾಗಿದೆ. ಇದು ರಾಜ್ಯದಲ್ಲಿ ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರೆಡ್ ಹ್ಯಾಂಡಾಗಿ ದಾಖಲಾದ ಮೊದಲ ಪ್ರಕರಣ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು, ತಾಲೂಕು ಅಧಿಕಾರಿಗಳ ತಂಡ ಆಸ್ಪತ್ರೆ ಮೇಲೆ ದಾಳಿ ಮಾಡಿದ ಬಳಿಕ ಆಸ್ಪತ್ರೆ ಮಾಲೀಕನ ಮೊಬೈಲ್ ಫೆÇೀನ್ ಸ್ವಿಚ್ ಆಫ್ ಆಗಿದ್ದು ಮಾಲೀಕ ನಾಪತ್ತೆಯಾಗಿದ್ದಾರೆ. ಆಸ್ಪತ್ರೆಯ ಸಿಬ್ಬಂದಿಗಳು ಕೂಡ ಮಾಹಿತಿ ನೀಡುತ್ತಿಲ್ಲ ಎಂದು ಆಸ್ಪತ್ರೆಯನ್ನು ಜಿಲ್ಲಾ ಆರೋಗ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ. ಅಧಿಕಾರಿಗಳ ತಂಡ ಹಾಗೂ ಪೆÇಲೀಸರು ಶೋಧ ಕಾರ್ಯ ಮುಂದುವರೆಸಿದ್ದಾರೆ..