ಗ್ರಾಮ ಪಂಚಾಯತ್ ಲಾಯಿಲ ವಿಕಾಸಿತ್ ಭಾರತ್ ಸಂಕಲ್ಪ ಯಾತ್ರೆ ಕಾರ್ಯಕ್ರಮ: 5 ಮಂದಿ ಗ್ರಾಮದ ಸಾಧಕರಿಗೆ ಸನ್ಮಾನ :

 

 

 

ಬೆಳ್ತಂಗಡಿ:ಕೇಂದ್ರ ಸರ್ಕಾರದ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಕಾರ್ಯಕ್ರಮ ಲಾಯಿಲ ಗ್ರಾಮ ಪಂಚಾಯತ್ ವಠಾರದಲ್ಲಿ ಡಿ 18 ರಂದು ನಡೆಯಿತು.ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಭಾಗವಹಿಸಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರಲ್ಲದೇ ಗ್ರಾಮದ ಪ್ರತಿಯೊಬ್ಬರೂ ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕು ಎಂದರು. ಕಾರ್ಯಕ್ರಮದಲ್ಲಿ ಕಿಸಾನ್ ಕ್ರೆಡಿಟ್ ಕಾರ್ಡ್, ಆಯುಷ್ಮಾನ್ ಕಾರ್ಡ್, ಪ್ರಧಾನ ಮಂತ್ರಿ ಸುರಕ್ಷಾ ಭೀಮಾ ಯೋಜನೆ, ಜೀವನ್ ಜ್ಯೋತಿ ಭೀಮಾ ಯೋಜನೆ, ಉಜ್ವಲ ಗ್ಯಾಸ್ ಯೋಜನೆ, ಹಾಗೂ ಇನ್ನಿತರ ಕೇಂದ್ರ ಸರಕಾರದ ಯೋಜನೆಗಳ ಮಾಹಿತಿ ಹಾಗೂ ನೋಂದಾವಣೆ ನಡೆಯಿತು.ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ 5 ಮಂದಿ ಫಲಾನುಭವಿಗಳನ್ನು ಸನ್ಮಾನಿಸಲಾಯಿತು.ಸನ್ಮಾನಿತರ ಪರವಾಗಿ ಪ್ರಕಾಶ್ ಕಾಶಿಬೆಟ್ಟು ಅನಿಸಿಕೆ ವ್ಯಕ್ತಪಡಿಸಿದರು. ಬ್ಯಾಂಕ್ ಆಫ್ ಬರೋಡ ಮ್ಯಾನೇಜರ್ ವಿನಾಯಕ ಹೆಗ್ಡೆ ಪಿಡಿಒ ಶ್ರೀನಿವಾಸ್ ಡಿ.ಪಿ. ಪ್ರತಿಜ್ಞಾ ವಿಧಿ ಭೋಧಿಸಿದರು. ಪಂಚಾಯತ್ ಅಧ್ಯಕ್ಷೆ ಜಯಂತಿ ಎಂ.ಕೆ. ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಉಪಾಧ್ಯಕ್ಷೆ ಸುಗಂಧಿ ಜಗನ್ನಾಥ್, ಗ್ರಾಮ ಪಂಚಾಯತ್ ಸದಸ್ಯರು, ಫಲಾನುಭವಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು. ರುಕ್ಮಯ್ಯ ಕನ್ನಾಜೆ ನಿರೂಪಿಸಿ ಸದಸ್ಯ ಮಹೇಶ್ ಧನ್ಯವಾದವಿತ್ತರು.

error: Content is protected !!