ನೆರಿಯಾ : ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಮೇಲೆ ಉರುಳಿ ಬಿದ್ದ ಬೃಹತ್ ಮರ: ತಪ್ಪಿದ ಭಾರೀ ದೊಡ್ಡ ದುರಂತ..!

ನೆರಿಯಾ : ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಮೇಲೆ ಬೃಹತ್ ಮರವೊಂದು ಉರುಳಿ ಬಿದ್ದ ಘಟನೆ ಡಿ.21ರಂದು ಸಂಭವಿಸಿದೆ.

ಬೆಳಿಗ್ಗೆ 7 ಗಂಟೆಗೆ ಕಟ್ಟಡದ ಮೇಲೆ ಮರ ಬಿದ್ದಿದ್ದು ಕಟ್ಟಡಕ್ಕೆ ಹಾನಿಯಾಗಿದೆ. ಆದರೆ ಇಲ್ಲಿ ರಾತ್ರಿ ಹೊತ್ತು ರೋಗಿಗಳು ಹಾಗೂ ಸಿಬ್ಬಂದಿಗಳು ಇಲ್ಲದೇ ಇರುವ ಕಾರಣ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಹಗಲು ಹೊತ್ತಿನಲ್ಲಿ ಗ್ರಾಮೀಣ ಭಾಗದ ಜನರು ಹೆಚ್ಚು ಈ ಆರೋಗ್ಯ ಕೇಂದ್ರಕ್ಕೆ ಬರುತ್ತಾರೆ. ಮರ ಮುಂಜಾನೆ ಉರುಳಿ ಬಿದ್ದಿದ್ದರಿಂದ ದೊಡ್ಡ ದುರಂತವೊಂದು ತಪ್ಪಿದೆ.

ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

error: Content is protected !!