ಡಿಸೆಂಬರ್ 26 ‘ಯುವನಿಧಿ’ ಯೋಜನೆ ನೋಂದಣಿಗೆ ಚಾಲನೆ

ಬೆಂಗಳೂರು: ಕಾಂಗ್ರೆಸ್ ಘೋಷಣೆಯ ‘ಯುವನಿಧಿ’ ಯೋಜನೆ ನೋಂದಣಿಗೆ ಡಿ. 26ರಂದು ವಿಧಾನಸೌಧ ಬ್ಯಾಂಕ್ವೆಟ್ ಹಾಲ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದಾರೆ.

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಧೀನದ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಮುಖಾಂತರ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, 2024 ಜನವರಿ 12 ರ ವಿವೇಕಾನಂದ ಜಯಂತಿ ದಿನ ಈ ಯೋಜನೆಗೆ ಶಿವಮೊಗ್ಗದಲ್ಲಿ ಅಧಿಕೃತ ಚಾಲನೆ ನೀಡಲಾಗುತ್ತಿದೆ.

ರಾಜ್ಯದ ಪದವೀಧರರು, ಸ್ನಾತಕೋತ್ತರ ಪದವೀಧರರು, ಡಿಪ್ಲೋಮಾ ತೇರ್ಗಡೆಯಾದವರು ನಿರುದ್ಯೋಗ ಭತ್ಯೆಯನ್ನು ಪಡೆಯಲು ಅರ್ಹರಿದ್ದು, ಕನಿಷ್ಠ 6 ವರ್ಷಗಳ ಕಾಲ ಕರ್ನಾಟಕದಲ್ಲಿ ವ್ಯಾಸಂಗ ಮಾಡಿರಬೇಕು. ಅಭ್ಯರ್ಥಿಗಳು 2022-23ನೇ ಶೈಕ್ಷಣಿಕ ವರ್ಷದಲ್ಲಿ ವ್ಯಾಸಂಗ ಮಾಡಿ ಪದವಿ, ಡಿಪ್ಲೋಮಾ 2023ರಲ್ಲಿ ತೇರ್ಗಡೆಯಾಗಿರಬೇಕು ಎಂದು ತಿಳಿಸಲಾಗಿದೆ.

ಪದವೀಧರರಿಗೆ ಮಾಸಿಕವಾಗಿ ರೂ.3,000 ಹಾಗೂ ಡಿಪ್ಲೋಮಾ ತೇರ್ಗಡೆಯಾದವರಿಗೆ ರೂ.1,500ಗಳನ್ನು ನಿರುದ್ಯೋಗ ಭತ್ಯೆಯನ್ನಾಗಿ ಅಭ್ಯರ್ಥಿಗಳ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ ಮೂಲಕ ನೀಡಲು ತೀರ್ಮಾನಿಸಲಾಗಿದೆ.

error: Content is protected !!