ಬೆಂಗಳೂರು: ರಾಜ್ಯದಲ್ಲಿ ಕೊವೀಡ್ ಭೀತಿ ಆರಂಭವಾಗುತ್ತಿದ್ದು ಈ ಬಗ್ಗೆ ಸರಕಾರ ಎಚ್ಚರಗೊಂಡಿದೆ. ಗೃಹ ಕಚೇರಿ ಕೃಷ್ಣಾದಲ್ಲಿ ಕೋವಿಡ್ ನಿಯಂತ್ರಣ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಸಭೆ ನಡೆಸಿ ಅಗತ್ಯ ಸಿದ್ಧತೆಗಳ ಬಗ್ಗೆ ಮಾತನಾಡಿದ್ದಾರೆ.
ರಾಜ್ಯದಲ್ಲಿ ಕೋವಿಡ್ ಪಾಸಿಟಿವ್ ಇದ್ದ ಮೂವರು ನಿಧನರಾಗಿದ್ದಾರೆ. ಆದರೆ ಮೂವರೂ ಕೂಡ ಕೋವಿಡ್‌ನಿಂದಲೇ ಮೃತಪಟ್ಟರು ಎನ್ನಲಾಗುವುದಿಲ್ಲ. ಅವರಿಗೆ ಹೃದಯ, ಕಿಡ್ನಿ, ಶ್ವಾಸಕೋಶ ಸಮಸ್ಯೆ, ಮಧುಮೇಹ ಹಾಗು ಬಿಪಿ ಇತ್ತು. ಆದರೂ ಕೋವಿಡ್ ನಿರ್ವಹಣೆಗೆ ಅಗತ್ಯ ಸಿದ್ದತೆ ಮಾಡಿಕೊಳ್ಳಲು ಆರೋಗ್ಯ ಇಲಾಖೆಗೆ ಸೂಚಿಸಲಾಗಿದ್ದು, ನಿರ್ವಹಣೆಗೆ ಸಂಪುಟ ಉಪ ಸಮಿತಿ ರಚಿಸಲಾಗಿದೆ. ಗಡಿ ಭಾಗದಲ್ಲಿ ಹೆಚ್ಚು ತಪಾಸಣೆ ಮಾಡಬೇಕಿದೆ ಎಂದಿದ್ದಾರೆ.
ಮುನ್ಸೂಚನಾ ಕ್ರಮವಾಗಿ ಕೋವಿಡ್‌ಗೆ ಯಾರೂ ಭಯಪಡಬೇಕಾದ ಅಗತ್ಯ ಇಲ್ಲ. ಆದರೆ ಎಚ್ಚರಿಕೆ ಕ್ರಮ ಅನುಸರಿಸಬೇಕು. ಜನಸಂದಣಿ ಇರುವ ಕಡೆ ಮಾಸ್ಕ್ ಧರಿಸಿ, 60 ವರ್ಷಕ್ಕೂ ಹೆಚ್ಚಿನ ವಯಸ್ಸಿನವರು ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ಶಾಲಾ ಮಕ್ಕಳು ಮಾಸ್ಕ್ ಧರಿಸಿದರೆ ಉತ್ತಮ. ಆದರೆ ಮಾಸ್ಕ್ ಕಡ್ಡಾಯ ಮಾಡುವ ಪರಿಸ್ಥಿತಿ ಇಲ್ಲ ಎಂದಿದ್ದಾರೆ.