ಬೆಳ್ತಂಗಡಿ : 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಅಂದರ್ ..!

ಬೆಳ್ತಂಗಡಿ :  ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ವರ್ಷಗಳಿಂದ ತಲೆಮರೆಸಿಕೊಂಡಿದ ವಾರೆಂಟ್ ಆರೋಪಿಯನ್ನು ಡಿ.21ರಂದು ಖಚಿತ ಮಾಹಿತಿ ಮೇರೆಗೆ ಪೊಲೀಸರು ಬಂಧಿಸಿದ್ದಾರೆ

ವೇಣೂರು ಪೊಲೀಸ್ ಠಾಣೆಯಲ್ಲಿ 2016 ರಲ್ಲಿ ದಾಖಲಾದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ತಾಲೂಕಿನ ಐವತ್ತೋಕ್ಲು ಗ್ರಾಮದ ಪಂಜದ, ನೆಲ್ಲಿಕಟ್ಟೆ ನಿವಾಸಿ ದಿ.ಆದಂ ಮಗನಾದ ಶರೀಫ್ ಯಾನೇ ಮಹಮ್ಮದ್ ಶರೀಫ್ (43) ಎಂಬಾತನ ಮೇಲೆ ಪ್ರಕರಣ ದಾಖಲಾಗಿತ್ತು. ಬಳಿಕ ಆತ ತನ್ನ ಸ್ವಂತ ವಿಳಾಸದಲ್ಲಿ ವಾಸ ಮಾಡದೆ ವಿವಿಧ ಕಡೆಗಳಲ್ಲಿ ತಲೆಮರೆಸಿಕೊಂಡಿದ್ದ. ಸದ್ಯ ಈತನನ್ನು ಬೆಳ್ತಂಗಡಿ ಸರ್ಕಲ್ ಇನ್ಸ್ ಪೆಕ್ಟರ್ ನಾಗೇಶ್ ಕದ್ರಿ ನಿರ್ದೇಶನದಂತೆ ವೇಣೂರು ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಶ್ರೀ ಶೈಲಾ ಮತ್ತು ಸಬ್ ಇನ್ಸ್ ಪೆಕ್ಟರ್ ಆನಂದ್ ಎಂ ನೇತೃತ್ವದ ಸಿಬ್ಬಂದಿ ಪ್ರವೀಣ್ ಎಂ ಮತ್ತು ಸಚಿನ್ ರವರು ಡಿ.21 ರಂದು ಖಚಿತ ಮಾಹಿತಿ ಪಡೆದು ಕಾರ್ಯಾಚರಣೆ ನಡೆಸಿ ವಿಟ್ಲದ ಸಾರಡ್ಕ ಎಂಬಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ.

ಆರೋಪಿಯನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

error: Content is protected !!